nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » BMS ಟ್ರಸ್ಟ್ ಅಕ್ರಮ: ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
    ರಾಜ್ಯ ಸುದ್ದಿ September 27, 2022

    BMS ಟ್ರಸ್ಟ್ ಅಕ್ರಮ: ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

    By adminSeptember 27, 2022No Comments2 Mins Read
    kumarasmi

    ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದು ಖಚಿತ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರ ಕಚೇರಿಗೆ ತಲುಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

    ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಪ್ರಧಾನಿ ಆವರು ಸಮಯ ಬಂದಾಗಲೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇದ್ದಾರೆ. 20% ಕಮೀಷನ್ ಬಗ್ಗೆ ಮೊದಲು ಮಾತನಾಡಿದ್ದೆ ಅವರು. ಈಗ ಅವರದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ 100% ತಾಂಡವವಾಡುತ್ತಿದೆ. ಈಗ ಅವರು ಏನು ಹೇಳುತ್ತಾರೆ ಎನ್ನುವುದನ್ನು ನಾನು ಕಾದು ನೋಡುತ್ತೇನೆ ಎಂದರು ಕುಮಾರಸ್ವಾಮಿ.

    ನನ್ನ ಬಳಿ ಬಿಎಂಎಸ್ ಟ್ರಸ್ಟ್ ಅಕ್ರಮದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರಿಗೆ ತಲುಪಿಸುತ್ತೇನೆ. ದಾಖಲೆಗಳ ಸಮೇತ ವಿಧಾನಸಭೆಯಲ್ಲಿ ದಾಖಲೆಗಳನ್ನ ಇಟ್ಟು ಮಾತನಾಡಿದರೂ ಬಿಜೆಪಿ ಸರಕಾರಕ್ಕೆ ತನಿಖೆ ಮಾಡಿಸುವ ಧೈರ್ಯ ಇಲ್ಲ. ತಾಕತ್ತು, ದಮ್ಮು ಎಂದೆಲ್ಲ ಮಾತನಾಡುವ ಮುಖ್ಯಮಂತ್ರಿಗಳಿಗೆ ತನಿಖೆಗೆ ಆದೇಶ ನೀಡುವ ಧೈರ್ಯ ಇಲ್ಲ ಎಂದು ಕುಮಾರಸ್ವಾಮಿ ಚಾಟಿ ಬೀಸಿದರು.

    ಬಿಜೆಪಿ ಭಂಡತನ ಪ್ರದರ್ಶನ ಮಾಡುತ್ತಿದೆ. ದಾಖಲೆಗಳನ್ನು ಇಟ್ಟು ಹಗರಣದ ಬಗ್ಗೆ ಹೇಳಿದರೂ ಸರಕಾರ ವಿತಂಡ ವಾದ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ರಾಷ್ಟ್ರೀಯ ಪಕ್ಷಗಳ ಕೆಸರೆರೆಚಾಟ:

    ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಸಮಸ್ಯೆಗಳ ಕಡೆ ಗಮನ ಕೊಡದೆ ಕೇವಲ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿವೆ. ಪೇ ಸಿಎಂ ಎನ್ನುವ ಪ್ರಚಾರವನ್ನು ಒಂದು ಪಕ್ಷ ಶುರು ಮಾಡಿದೆ. ಅದಕ್ಕೆ ಪ್ರತಿಯಾಗಿ ಇನ್ನೊಂದು ಪಕ್ಷ ಮತ್ತೊಂದು ಪ್ರಚಾರ ಆರಂಭ ಮಾಡಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸ್ತೀವಿ ಅಂತ ಹೊರಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಸರಕಾರದಲ್ಲಿ ಹಗರಣಗಳು ನಡೆಯುತ್ತಿವೆ. ಮತ್ತೆ ಅಧಿಕಾರ ಕೊಟ್ಟರೆ ಎಲ್ಲವನ್ನೂ ಸರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಸರಿ ಮಾಡುತ್ತೇವೆ ಎಂದರೆ ಹಗರಣಗಳ ದಾಖಲೆ ಕೊಟ್ಟರೂ ಕಳಂಕಿತ ಸಚಿವರನ್ನು ರಕ್ಷಣೆ ಮಾಡುವುದಾ? ಎಂದು ಅವರು ಪ್ರಶ್ನೆ ಮಾಡಿದರು.

    ಇದೇ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, 20% ಆರೋಪ ಮಾಡಿದವರೇ ಈಗ 40% ಆರೋಪಕ್ಕೆ ಗುರಿಯಾಗಿದ್ದಾರೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಚಾಟಿ ಬೀಸಿದರು. ವಿಧಾನ ಪರಿಷತ್ ಸದಸ್ಯ ಭೋಜೆಗೌಡರು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.