ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ.
ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸಿ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಮೃತ ಪಟ್ಟಿದೆ. ಬಿಎಂಟಿಸಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು,ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


