ತುಮಕೂರು: ಕಂಟ್ರೋಲ್ ತಪ್ಪಿದ ಬಿಎಂಟಿಸಿ ಬಸ್ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 29 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ನಡೆದಿದೆ.
ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ BMTC ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಗೇಶ್, ಧನಂಜಯ, ಮನ್ವಿತ್ ಹಾಗೂ ಪಾರ್ವತಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW