ಬೆಂಗಳೂರು ಗ್ರಾಮಾಂತರ:ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್(43) ಮೃತ ರ್ದುದೈವಿ. ಇವರು ಕಳೆದ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಡಿಪೋ 9ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296