ಬೆಂಗಳೂರು: ಬೈಕ್ ಸವಾರ ಹಾಗೂ ಪಾದಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯ ಮುರುಗೇಶಪಾಳ್ಯ ಸಿಗ್ನಲ್ ಬಳಿ ಬುಧವಾರ ರಾತ್ರಿ ನಡೆದಿದೆ.
ರಾತ್ರಿ 10 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಬಸ್ ನ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಹಳೇ ವಿಮಾನ ನಿಲ್ದಾಣದ ಮುರುಗೇಶಪಾಳ್ಯ ಸಿಗ್ನಲ್ನಲ್ಲಿ ಇ–ಕಾಮರ್ಸ್ ಬೈಕ್ ಸವಾರ ಯೂಟರ್ನ್ ತೆಗೆದುಕೊಂಡಿದ್ದ. ಅದೇ ರಸ್ತೆಯಲ್ಲಿ ಜಿಮ್ ಮುಗಿಸಿ ಬರುತ್ತಿದ್ದ ಪಾದಚಾರಿಯೊಬ್ಬರು ಡಿವೈಡರ್ ಕ್ರಾಸ್ ಮಾಡಿ, ರಸ್ತೆ ದಾಟುತ್ತಿದ್ದರು. ಈ ವೇಳೆ KA51 AJ6167 ನಂಬರಿನ ಬಸ್ ಇಬ್ಬರಿಗೂ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರ ಹಾಗೂ ಪಾದಚಾರಿಗೆ ಡಿಕ್ಕಿ ಹೊಡೆದ ಬಸ್ ಸುಮಾರು 50 ಮೀಟರ್ ವರೆಗೆ ಇಬ್ಬರನ್ನೂ ಎಳೆದೊಯ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಜೀವನ್ ಭೀಮಾನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಮೃತರ ಗುರುತು ಪತ್ತೆಹಚ್ಚಲು ಮುಂದಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4