ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಆಘಾತಕಾರಿ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೀನ್ಸ್ ಜಂಕ್ಷನ್ ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು.
ಈ ವೇಳೆ ಆಕ್ರೋಶಗೊಂಡ ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾನೆ. ಆದರೆ, ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು.
ಚಾಲಕನ ಕೃತ್ಯ ಕಂಡು ಜನರು ಬೆಚ್ಚಿಬಿದ್ದಿದ್ದರು. ಇನ್ನು, ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಬಸ್ ಚಾಲಕ ಪ್ರಶಾಂತ್ ನನ್ನು ಅಮಾನತುಗೊಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW