ಬೆಂಗಳೂರು: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ರವಿವಾರ ನಡೆದಿದೆ.
ಅಪಘಾತದ ವೇಳೆ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ.
ಅವಘಡದಿಂದ ಬಸ್ ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ.
ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ. ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಢಾಬಾ ಮಾಲೀಕರ ದೂರಿನ ಆಧಾರದ ಮೇಲೆ ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx