ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ಶಾಲಾ ಮಕ್ಕಳಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 18 ಮಂದಿ ನಾಪತ್ತೆಯಾಗಿದ್ದಾರೆ. 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅನಧಿಕೃತ ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆನ್ನೆ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಮಧುಪುರ್ ಪಟ್ಟಿ ಘಾಟ್ ಬಳಿ ಬಾಗಮತಿ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ದೋಣಿಯಲ್ಲಿ 34 ವಿದ್ಯಾರ್ಥಿಗಳು ಇದ್ದರು ಎಂದು ಸ್ಥಳೀಯರು ಹೇಳುತ್ತಾರೆ. ಎನ್ ಡಿಆರ್ ಎಫ್, ಎಸ್‌ಡಿಆರ್ ಎಫ್ ಹಾಗೂ ಸ್ಥಳೀಯರ ನೇತೃತ್ವದಲ್ಲಿ ಮಕ್ಕಳ ಪತ್ತೆ ಕಾರ್ಯ ಮುಂದುವರೆದಿದೆ.


