ಒಡಿಶಾ: ಒಡಿಶಾ ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ದೋಣಿಯಲ್ಲಿ 50ಕ್ಕೂ ಹೆಚ್ಚು ಮಂದಿ ಪಯಣ ಮಾಡುತ್ತಿದ್ದ ವೇಳೆ ದೋಣಿ ಏಕಾಏಕಿ ಮಗುಚಿ ಬಿದ್ದು, ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು ಅವರ ಮೃತದೇಹ ಪತ್ತೆಯಾಗಿದೆ. ಮೂವರು ಮಕ್ಕಳು ಸೇರಿದಂತೆ ನಾಪತ್ತೆಯಾಗಿರುವ ಏಳು ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ.
ಇದುವರೆಗೆ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ದೋಚಿ ಮಗುಚಿ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಆಗಮಿಸಿ ಕಾರ್ಯಾಚರಣೆಗೆ ಮುಂದಾಗಿದ್ದರು.
ನಾವು ಇಲ್ಲಿಯವರೆಗೆ ಸುಮಾರು 47-48 ಜನರನ್ನು ರಕ್ಷಿಸಿದ್ದೇವೆ ಮತ್ತು ಅವರನ್ನು ಅವರ ಗ್ರಾಮಗಳಿಗೆ ಕಳುಹಿಸುತ್ತೇವೆ.
35 ವರ್ಷದ ಮಹಿಳೆಯ ಶವವನ್ನು ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳು ಕಾಣೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296