ಬೆಂಗಳೂರು: ಆನೇಕಲ್ ತಾಲೂಕಿನ ಪ್ರತಿಷ್ಠಿತ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿಬಿದ್ದ ದುರಂತದಲ್ಲಿ ಗಾಯಗೊಂಡಿದ್ದ ಯುವತಿ ಭಾನುವಾರ ಮೃತಪಟ್ಟಿದ್ದಾಳೆ.
ಮೃತಳನ್ನು ಜ್ಯೋತಿ (16) ಎಂದು ಗುರುತಿಸಲಾಗಿದೆ. ದುರ್ಘಟನೆ ನಡೆದ ದಿನ ಲೋಹಿತ್ ಎಂಬ ಯುವಕ ಸಾವನ್ನಪ್ಪಿದ್ದ ಇದೀಗ ಘಟನೆಯಲ್ಲಿ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕ ರಾಕೇಶ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಇದೀಗ ಮೃತಪಟ್ಟಿರುವ ಜ್ಯೋತಿ ತನ್ನ ತಾಯಿ ಗಂಗಮ್ಮನೊಂದಿಗೆ ಜಾತ್ರೆಯಲ್ಲಿ ಗೊಂಬೆ ಮಾರಾಟ ಮಾಡಲು ಬಂದಿದ್ದಳು ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4