ಲಕ್ನೋ: ಪ್ರಯಾಗ್ ರಾಜ್ ನ ನಾವಿಕ ಕುಟುಂಬವೊಂದು 45 ಗಳ ಕಾಲ ಸುಮಾರು 130 ದೋಣಿಗಳ ಮೂಲಕ 30 ಕೋಟಿ ರೂ. ಆದಾಯ ಬಂದಿದೆ.
ಪ್ರತಿನಿತ್ಯ ದೋಣಿಯಿಂದ 50,000–52,000 ರೂಪಾಯಿ ಆದಾಯಗಳಿಸಿದೆ. ಈ ದೋಣಿಯು 45 ದಿನದಲ್ಲಿ 23 ಲಕ್ಷ ರೂಪಾಯಿಯಷ್ಟು ಗಳಿಕೆ ಮಾಡಿದೆ. ಅಂದ್ರೆ ಪ್ರತಿನಿತ್ಯ ಒಂದು ದೋಣಿಯಿಂದ 50,000–52,000 ರೂಪಾಯಿ ಆದಾಯ ಬಂದಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಪ್ರಯಾಗ್ ರಾಜ್ ನ ಅರೈಲ್ ಪ್ರದೇಶದ ದೋಣಿ ಚಾಲಕ ಪಿಂಟು ಮಹಾರ, ಮಹಾಕುಂಭದ ಸಮಯದಲ್ಲಿ ವಿವಿಐಪಿಗಳನ್ನು ಮತ್ತು ಸಾಮಾನ್ಯ ಭಕ್ತರನ್ನು ಸ್ನಾನದ ಘಾಟ್ ಗಳಿಗೆ ಕರೆದೊಯ್ಯುವ ಮೂಲಕ 30 ಕೋಟಿ ರೂ.ಗಳನ್ನು ಗಳಿಸಿದರು.
ಇದು ದೈವಿಕ ಅನುಗ್ರಹ ಮತ್ತು ಆಶೀರ್ವಾದ. ನನಗೆ 100 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಕುಟುಂಬವಿದೆ. ಭಕ್ತರ ಬೃಹತ್ ಆಗಮನವನ್ನು ನಿರೀಕ್ಷಿಸಿ, ಮಹಾಕುಂಭಕ್ಕೆ ಮುಂಚಿತವಾಗಿ ಒಟ್ಟು 130 ದೋಣಿಗಳನ್ನು ತೆಗೆದುಕೊಂಡೆ, ಅಲ್ಲಿಯವರೆಗೆ ನನ್ನ ಬಳಿ 60 ದೋಣಿಗಳಿದ್ದವು ಎಂದು ಪಿಂಟು ಹೇಳುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4