ದೇವನಹಳ್ಳಿ: ದಲಿತ ಬಾಲಕಿಯೊಬ್ಬಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿತಿನ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.
ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ನಿತಿನ್ ಎಂಬಾತ ಚುಡಾಯಿಸಿದ್ದನು. ಬಾಲಕಿ ಇದನ್ನು ಪ್ರಶ್ನಿಸಿದ್ದಕ್ಕೆ ನಿತಿನ್ ಬಾಲಕಿ ಮೇಲೆ ಹಲ್ಲೆ ನಡೆಸಿದ್ದನು. ಬಾಲಕಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಮಾಲೂರು ಠಾಣಾ ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಎರಡು ಗ್ರಾಮದ ಹಿರಿಯರು ಸೇರಿ ಇಬ್ಬರ ನಡುವೆ ರಾಜಿ ಪಂಚಾಯಿತಿ ನಡೆಸಿದ್ದರು.
ಇದಾದ ಮೂರು ದಿನಗಳ ಬಳಿಕ ಬಾಲಕಿ ನಾಪತ್ತೆಯಾಗಿದ್ದಳು. ನಿನ್ನೆ ಕುರಿ ಕಾಯಲು ಹೋಗಿದ್ದಾಗ ಬಾಲಕಿಯ ಮೃತದೇಹ ಕಂಡ ಕುರಿಹಾಗಿಗಳು ಪೋಷಕರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ವತ್ರೆಗೆ ರವಾನಿಸಿದ್ದಾರೆ.


