ಘಾಜಿಯಾಬಾದ್: ಪೇಪರ್ ಮಿಲ್ ವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ‘ನ ಭೋಜ್ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ.
ಬೆಳಿಗ್ಗೆ 6 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡ ಕಾರಣ ಮೂವರು ಕಾರ್ಮಿಕರು 50 ಅಡಿ ಮೇಲೆ ಎಸೆಯಲ್ಪಟ್ಟು, ಕೆಳಗೆ ಬಿದ್ದಿದ್ದಾರೆಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ನೆಲಕ್ಕೆ ಬಿದ್ದಿದ್ದವು ಎಂದು ಮೂಲಗಳು ತಿಳಿಸಿವೆ. ಮೃತ ಕಾರ್ಮಿಕರನ್ನು ಯೋಗೇಂದ್ರ, ಅನುಜ್ ಮತ್ತು ಅವಧೇಶ್ ಎಂದು ಗುರುತಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4