ಬೊಕ್ಕೆ, ಸಿಹಿತಿನಿಸು ಬೇಡ, ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ ಎಂದು ತಮ್ಮ ಕಿರಿಯ ಅಧಿಕಾರಿಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ವಿಶೇಷ ಸೂಚನೆ ನೀಡಿ ಮಾದರಿಯಾಗಿದ್ದಾರೆ.
ಹೊಸ ವರ್ಷ ಮತ್ತು ಕೆಲ ವಿಶೇಷ ದಿನಗಳಲ್ಲಿ ಹಿರಿಯ ಅಧಿಕಾರಿಗಳಿಗೆ ಕಿರಿಯ ಅಧಿಕಾರಿಗಳು ಹೂ ಗುಚ್ಚ, ಸಿಹಿ ತಿನಿಸು ನೀಡಿ ಶುಭಾಶಯ ಕೋರೋದು ವಾಡಿಕೆ. ಆದರೆ ಈ ಬಾರಿ ಹೊಸ ವರ್ಷಕ್ಕೆ ಶುಭಾಶಯ ತಿಳಿಸಲು ಬರುವ ಕಿರಿಯ ಅಧಿಕಾರಿಗಳು ಬೊಕ್ಕೆ, ಸಿಹಿ ತಿನಿಸು ತರದೆ ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ ಎಂದು ಬಿ. ದಯಾನಂದ್ ತಿಳಿಸಿದ್ದಾರೆ.
ಹಾಗೆಯೇ ಅನಾಥಾಶ್ರಮಗಳಿಗೆ ಸಹಾಯ ಮಾಡಿದ ಆ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಿ. ಫೋಟೋ ಹಂಚಿಕೊಳ್ಳುವುದರಿಂದ ಮತ್ತೊಬ್ಬರಿಗೂ ಮಾದರಿಯಾಗುತ್ತೀರಾ ಎಂದು ಬಿ. ದಯಾನಂದ್ ಸಲಹೆ ನೀಡಿದ್ದಾರೆ.


