ನವದೆಹಲಿ: ದೆಹಲಿಯಲ್ಲಿ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದೆ. ನಗರದ ಡಿಪಿಎಸ್ ದ್ವಾರಕಾ, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಮತ್ತು ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆದರಿಕೆ ಹಾಕಲಾಗಿದೆ.
ಬೆದರಿಕೆ ಬಂದ ತಕ್ಷಣಕ್ಕೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮುನ್ನೆಚ್ಚರಿಕೆಯಾಗಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಾಂಬ್ ಸಂದೇಶ ಪಡೆದ ಡಿಪಿಎಸ್ ದ್ವಾರಕಾ ಶಾಲೆಯನ್ನು ಬಂದ್ ಮಾಡಲಾಗಿದ್ದು, ಇಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆದರಿಕೆ ಸ್ವೀಕರಿಸಿದ ಶಾಲೆಗಳಿಗೆ ಪೊಲೀಸ್ ತಂಡಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC