ನವದೆಹಲಿ: ಶಾಲೆಗಳಿಗೆ ಬಾಂಬ್ ಬೆದರಿಕೆ ಕಳುಹಿಸಿದ್ದ ಆರೋಪದಲ್ಲಿ 12 ನೇ ತರಗತಿ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸುಮಾರು 10 ಶಿಕ್ಷಣ ಸಂಸ್ಥೆಗಳಿಗೆ ನಿನ್ನೆ ಬಾಂಬ್ ಬೆದರಿಕೆ ಬಂದಿದ್ದು,ಎಚ್ಚೆತ್ತ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆದರಿಕೆ ಹಾಕಿದ 12 ನೇ ತರಗತಿ ವಿದ್ಯಾರ್ಥಿಯು ಅಪ್ರಾಪ್ತ ವಯಸ್ಕನಾಗಿದ್ದಾನೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಳನ್ನು ಪೊಲೀಸ್ ಅಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ಬಹಿರಂಗ ಪಡಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx