ಬೆಂಗಳೂರು: ವಸಂತ ನಗರದಲ್ಲಿರುವ ಶಾಂಗ್ರಿಲಾ ಪಂಚತಾರಾ ಹೋಟೆಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಹೈಗೌಂಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಹೋಟೆಲ್ ನ ಇ- ಮೇಲ್ ಗೆ ಆಗಸ್ಟ್ 8ರಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕವೇ ಹೋಟೆಲ್ ನ ಪ್ರತಿನಿಧಿ ಶುಕ್ರವಾರ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಹೋಟೆಲ್ ನಲ್ಲಿ ತಪಾಸಣೆ ಸಹ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್ ಗಳ ಇ-ಮೇಲ್ ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್ ನವರಿಗೆ ಬೆದರಿಕೆಯೊಡ್ಡಿರುವುದು ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


