ಕೊರಟಗೆರೆ: ಹಣ ದುರುಪಯೋಗ ಆರೋಪದಲ್ಲಿ ಬೂದಗವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಆದೇಶಿಸಿದ್ದಾರೆ.
ಬೂದಗವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘುನಂದನ್ ಅಮಾನತ್ತಾದ ಅಧಿಕಾರಿಯಾಗಿದ್ದಾರೆ. ನರೇಗಾ ಯೋಜನೆಯಡಿ ನಡೆದ ಕಾಮಗಾರಿಯ ಹಣದ ದುರುಪಯೋಗದ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ.
ಚನ್ನರಾಯನದುರ್ಗ ಸರ್ಕಾರಿ ಶಾಲಾ ಆವರಣದಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆದ ಕಾಮಗಾರಿಯ ಹಣ ಫಲಾನುಭಾವಿಗಳಿಗೆ ತಲುಪದೆ, ಗೋಲ್ಮಾಲ್ ಮಾಡಿ, ಕರ್ತವ್ಯ ಲೋಪ ವಹಿಸಿದ್ದರು ಎಂದು ಆರೋಪಿಸಲಾಗಿದೆ.
ಈ ಕುರಿತು ಸಮಾಜ ಹೋರಾಟಗಾರ ಹಾಗೂ ಪತ್ರಕರ್ತರಾದ ಜೆಟ್ಟಿ ಅಗ್ರಹಾರ ನಾಗರಾಜು ಅವರು ಆಗಸ್ಟ್ 19ರಂದು ವಾಟ್ಸಾಪ್ ಮೂಲಕ ಈ ವಿಷಯವನ್ನು ಜಿಲ್ಲಾ ಪಂಚಾಯತ್ ಸಿಇಒ ಅವರ ಗಮನಕ್ಕೆ ತಂದಿದ್ದರು. ನಂತರ ಈ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿದ ಬೆನ್ನಲ್ಲೇ, ಜಿಲ್ಲಾ ಪಂಚಾಯತ್ ಸಿಇಒ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶಿಸ್ತು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾದ್ಯಂತ ಈ ರೀತಿಯ ಘಟನೆಗಳಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಸಿಇಒ ಅವರ ತಕ್ಷಣದ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296