ತುಮಕೂರು: ನಾಡಿನ ಜನತೆಗೆ ಅತ್ಯಮೂಲ್ಯವಾದ ಪುಸ್ತಕಗಳ ವೀಕ್ಷಣೆ ಹಾಗೂ ಖರೀದಿಗಾಗಿ ಫೆಬ್ರವರಿ 27 ರಿಂದ ಮಾರ್ಚ್ 3ರವರೆಗೆ ಬೆಂಗಳೂರಿನ “ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು” ಏರ್ಪಡಿಸಲಾಗುವುದು.
ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ಈ ಮೇಳವನ್ನು ಆಯೋಜಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದೆ.
ಮೇಳದಲ್ಲಿ ಭಾಗವಹಿಸುವವರು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ. ಸಲ್ಲಿಸಬೇಕು.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಅಥವಾ ವಿಧಾನ ಸಭೆ ಸಚಿವಾಲಯದ ವೆಬ್‌ಸೈಟ್ www.kla.kar.nic.in ನಿಂದ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಡಿ.ಡಿ. ಲಗತ್ತಿಸಿ ಫೆಬ್ರವರಿ 12ರ ಸಂಜೆ 5 ಗಂಟೆಯೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು-560001 ಅಥವಾ ದೂ.ವಾ.ಸಂ. 080–22381350ಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಮುಖ್ಯ ಗ್ರಂಥಪಾಲಕ ಕನಕಪ್ಪ ನಲವಾಗಲ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4