ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4