ತುಮಕೂರು: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಕೋರಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ(ಸಂಪರ್ಕ ಸಂಖ್ಯೆ: 080–22107705), ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ, ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ)ನಲ್ಲಿಯೂ ಕೂಡ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx