ಹಿರಿಯೂರು: ರಾಜ್ಯಾದ್ಯಂತ ಅತಿ ವೇಗವಾಗಿ ಕೊರೊನಾ 3ನೇ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೇರವಾಗಿ ಸಂಪರ್ಕ ಇರುವ ಬೀದಿ ಬದಿ ವ್ಯಾಪಾರಿಗಳು ವರ್ತಕರುಗಳೆಲ್ಲರೂ ಇಂದಿನಿಂದ ಬೂಸ್ಟರ್ ಡೋಸ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂಬುದಾಗಿ ಕ್ಷೇತ್ರದ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ ಮನವಿ ಮಾಡಿದರು.
ಹಿರಿಯೂರು ನಗರದ ಗಾಂಧಿ ಸರ್ಕಲ್ ಬಳಿ ಇರುವ ನೆಹರೂ ಮಾರ್ಕೆಟ್ ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಹಮ್ಮಿಕೊಳ್ಳಲಾಗಿದ್ದ ಕೋವಿಡ್ -19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊರೊನಾ ಸೋಂಕಿತರಿಗೆ ಸ್ಥಳದಲ್ಲೇ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡುವ ಕೆಲಸವನ್ನು ಇಂದಿನಿಂದಲೇ ಪ್ರಾರಂಭವಾಗುತ್ತದೆ, ಸಾರ್ವಜನಿಕರು ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಕೋವಿಡ್ 3 ನೇ ಅಲೆಯನ್ನು ಹಿರಿಯೂರು ತಾಲ್ಲೂಕಿನಲ್ಲಿ ತಡೆಗಟ್ಟಲು ಸರ್ಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಾರ್ವಜನಿಕರು ಸರ್ಕಾರದೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ರೋಟರಿ ಸಂಸ್ಥೆಯ ಎಂ.ಎಸ್.ರಾಘವೇಂದ್ರ ಮಾತನಾಡಿ, ನಾಗರಿಕರು ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಅನವಶ್ಯಕವಾಗಿ ಮನೆಯಿಂದ ಹೊರಗೆ ಬರದಿರುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಡಿ.ವೈಎಸ್.ಪಿ ರೋಷನ್ ಜಮೀರ್, ನಗರಸಭೆ ಪೌರಾಯುಕ್ತ ಉಮೇಶ್, ಜಿ.ಪಂ. ಮಾಜಿ ಸದಸ್ಯೆ ರಾಜೇಶ್ವರಿ, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ನಗರಸಭೆ ಸದಸ್ಯರಾದ ಮಹೇಶ್ ಪಲ್ಲವ, ಸರವಣ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy