ಅಚ್ಚ ಕನ್ನಡದಲ್ಲಿ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದಿರುವಂತ ಅಪರ್ಣಾ ಅವರು ಇಹಲೋಕ ತ್ಯಜಿಸಿದ್ದಾರೆ. ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೆಲವು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 11 ರಂದು ನಿಧನ ಹೊಂದಿದ್ದಾರೆ.
ಅಪರ್ಣಾ ಅವರ ವೈಕ್ತಿಕ ಜೀವನದ ಬಗ್ಗೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಅದರ ಕುರಿತು ಮಾಹಿತಿ ಇಲ್ಲಿದೆ.
ಸಿನಿಮಾ ಪತ್ರಕರ್ತರೊಬ್ಬರ ಪುತ್ರಿ ಅಪರ್ಣಾ ಆಗಿದ್ದಾರೆ. ನಿರೂಪಕಿಯಾಗಿ ಕೆಲಸ ಮಾಡಿ ಗುರುತಿಸಿಕೊಂಡಿದ್ದ ಅಪರ್ಣಾ ಅವರ ಪತಿಯ ಹೆಸರು ನಾಗರಾಜ್ ವಸ್ತಾರೆ. ಅಪರ್ಣಾ ಅವರು ಚಿಕ್ಕಮಗಳೂರಿನ ಪಂಚನಹಳ್ಳಿಯಲ್ಲಿ ಜನಿಸಿದ್ದು, ನಂತರ 1984 ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ನೀಡುತ್ತಾರೆ. ಇವರು 1989 ರಲ್ಲಿ ನಿರೂಪಕಿಯಾಗಿ ಕಿರುತೆರೆಗೆ ಕಾಲಿಡುತ್ತಾರೆ.
ಅಪರ್ಣಾ ಅವರಿಗೆ ನಾಗರಾಜ್ ವಸ್ತಾರೆ ಅವರೇ ಪ್ರಪಂಚವಾಗಿದ್ದರು. ಏಕೆಂದರೆ ಈ ದಂಪತಿಗಳಿಗೆ ಮಕ್ಕಳಿರಲಿಲ್ಲ. ತಮ್ಮ ಖಾಸಗಿ ವಿಚಾರದ ಕುರಿತು ಅಪರ್ಣಾ ಅವರು ಎಲ್ಲಿಯೂ ಹೇಳಿರಲಿಲ್ಲ. ಅಪರ್ಣಾ ಅವರ ಪತಿ ನಾಗರಾಜ್ ವಸ್ತಾರೆ ವಾಸ್ತುಶಿಲ್ಪಿಯಾಗಿ ಕೆಲಸ ಮಾಡುತ್ತಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್ ಗೆ ತುತ್ತಾಗಿ ನಮ್ಮನಗಲಿ ಬಾರದ ಲೋಕಕ್ಕೆ ಹೋಗಿದ್ದಾರೆ. ಅಪರ್ಣಾ ನೆನೆದು ಅವರ ಪತಿ ನಾಗರಾಜ್ ವಸ್ತಾರೆ ಕಣ್ಣೀರಿಟ್ಟಿದ್ದು, ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಇಬ್ಬರೂ ಸೋತಿದ್ದೇವೆ ಎಂದು ಪತ್ನಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಬಾರದ ಲೋಕಕ್ಕೆ ಹೋದ ಪತ್ನಿ ಅಪರ್ಣಾರನ್ನು ನೆನೆದು ಪತಿ ನಾಗರಾಜ್ ಅವರ ತಮ್ಮ ದುಃಖವನ್ನು ಕವನದ ಮೂಲಕ ತೋಡಿಕೊಂಡಿದ್ದಾರೆ.
ಬೆಳಗಿಕೊಂಡಿರೆಂದು
ಕಿಡಿ ತಾಕಿಸಿ ಹೊರಟಿತು
ಹೆಣ್ಣು
ಚಿತ್ತು ತೆಗೆದು
ಬತ್ತಿಯ ನೆತ್ತಿ ಚೆನ್ನಾಗಿಸಿ
ತಿರುಪಿ ತಿದ್ದಿ
ಇರು
ತುಸುವಿರೆಂದು ಕರೆದರೂ
ನಿಲ್ಲದೆಯೇ
ಬೇರಾವುದೋ ಕರೆಗೆ
ತಣ್ಣಗೆ ಓಗೊಟ್ಟ ಮೇರೆ
ಯಲ್ಲಿ
ಒಂದೇ ಒಂದು
ನಿಮಿಷ
ಬಂದೇನೆಂದು ಕಡೆಗಳಿಗೆ
ಯ ಸೆರಗಿನ ಬೆನ್ನಿನಲ್ಲಿ
ಅಂದು.
ಕಾದಿದ್ದೇನೆ
ಈಗ ಬಂದಾಳೆಂದು
ಆಗ ಬಂದಾಳೆಂದು
ಮರಳಿ
ಜೀವ ತಂದಾಳೆಂದು
ಇದು
ಮೂರನೇ ದಿವಸ
ಇಷ್ಟಾಗಿ
ಬೆಳಗಲಿಟ್ಟ ಕಿರಿಸೊಡರ
ಬೆಳಕು ನಾನು
ಉರಿವುದಷ್ಟೇ ಕೆಲಸ
ಇರುವ ತನಕ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


