nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿಗೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ: ಸಚಿವ ಜಿ.ಪರಮೇಶ್ವರ
    ತುಮಕೂರು June 9, 2025

    ತುಮಕೂರಿಗೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ: ಸಚಿವ ಜಿ.ಪರಮೇಶ್ವರ

    By adminJune 9, 2025No Comments3 Mins Read
    g parameshwar

    ಬೆಂಗಳೂರು:  ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸುವ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

    ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ. ಕೇಂದ್ರದ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು. ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ‌ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು.


    Provided by
    Provided by

    ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಆಗಬೇಕಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಅನೇಕ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ನಮ್ಮ ತಾಲ್ಲೂಕು ಸೇರಿದ್ದು, ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.

     

    ತುಮಕೂರು ನಗರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ಸ್ವಾಗತ ಕಮಾನು ನಿರ್ಮಿಸಿದರೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ 5 ಕೋಟಿ ರೂ. ಹಣ ಒದಗಿಸಿಕೊಂಡಿದ್ದೇವೆ ಎಂದು ಹೇಳಿದರು.

    ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನಗಳು ಏನಾಗುತ್ತದೆ ಎಂಬುದನ್ನು ನೋಡಿ ಸಚಿವ ವಿ.ಸೋಮಣ್ಣ ಮಾತನಾಡುತ್ತೇನೆ. ತುಮಕೂರಿಗೆ ಮೆಟ್ರೋ ಅಗತ್ಯ ಇದೆ ಎಂದು ಸೋಮಣ್ಣ ಅವರು ಹೇಳಿದ್ದಾರೆ. ಸಬ್ ಅರ್ಬನ್ ಯೋಜನೆಯು ಆಗಲಿ. ಎರಡು ಯೋಜನೆಗಳು ಆದರೆ ತಪ್ಪಿಲಿ ಎಂದರು.

    ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದೆ. 20 ಸಾವಿರ ಎಕರೆಯಲ್ಲಿ ಇಂಡಸ್ಟ್ರೀಯಲ್ ಹಬ್ ಮಾಡಿದ್ದೇವೆ. ಬಹಳ ಜನ ತುಮಕೂರನ್ನು ವಿಸ್ತರಣೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ.‌ ಬೆಂಗಳೂರಿಗೆ ತುಮಕೂರು 70 ಕಿ.ಮೀ.ನಲ್ಲಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗುತ್ತದೆ. ನಾವು ಕೂಡ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಹೇಳಿದರು.

    ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ‌. ಸಭೆ ಕರೆಯಬೇಕು ಎಂದು ಹೇಳಿದ್ದಾರೆ‌. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಆ ಭಾಗದ ಜನರು ಎನ್‌ ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ಸ್ಪಷ್ಟಪಡಿಸಿದರು.

    ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರನ್ನು ಕೇಳಿಲ್ಲ:

    ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

    ಖಾತೆ ಬದಲಾವಣೆ ಕುರಿತಂತೆ ನಿಮಗೆ ಯಾರು ಹೇಳಿದರು. ಒಂದು ವೇಳೆ ನಿಮ್ಮ ಕಿವಿಗೆ ಬಿತ್ತು ಅಥವಾ ಯಾರೋ ಹೇಳಿದರು‌ ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ. ಸುದ್ದಿ ಮಾಡುವ ಮೊದಲು ನನ್ನನ್ನು ನೇರವಾಗಿ ಕೇಳಬಹುದಲ್ಲವೇ ಎಂದರು.

    ನಾನು 30 ವರ್ಷದಿಂದ ನಿಮ್ಮೊಂದಿಗೆ ಸಂಯಮದಿಂದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿಯಾಗಿದ್ದೇನೆ. ವ್ಯಕ್ತಿಯ ವ್ಯಕ್ತಿತ್ವವನ್ನು ನಾಶ ಮಾಡುವುದು ಒಳ್ಳೆಯದಾಗಿ ಕಾಣಿಸುವುದಿಲ್ಲ, ಶೋಭೆ ತರುವುದಿಲ್ಲ ಎಂದರು.

    ನಾನು ನನ್ನ ಶ್ರೀಮತಿಯವರು ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು,  ಮುಖ್ಯಮಂತ್ರಿಯವರ ಬಳಿ ಕೇಳಿದರು. ಅವರು ಸುಮ್ಮನೆ ಇರಿ ಎಂದು ಎಂದೆಲ್ಲ ಸುದ್ದಿ ಮಾಡಲಾಗಿದೆ. ಇದನ್ನು ಯಾರು ಹೇಳಿದರು. ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು ಎಂದು ಹೇಳಿದರು.

    ನಮ್ಮನ್ನು ಅಭಿಮಾನಿಗಳು, ಜನ ಅನುಕರಿಸುವವರು ಇದ್ದಾರೆ. ಕ್ಷೇತ್ರದ ಮತದಾರರು ಏನೆಂದುಕೊಳ್ಳುತ್ತಾರೆ. ಮುಂದೆ ಈ ರೀತಿ ಊಹಾಪೋಹಾ ಸುದ್ದಿ ನಿಮ್ಮ ಕಿವಿಗೆ ಬಿದ್ದಾಗ ನನ್ನನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದು.

    ನಾನು ಯಾವತ್ತು ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಬೆಂಗಳೂರಿನಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳಾಗಬಾರದು. ಈ ಘಟನೆಯಿಂದ ನಾವು ನೋವನ್ನು ಅನುಭವಿಸುತ್ತಿದ್ದೇವೆ. ಇಂತಹ ಸವಾಲುಗಳನ್ನು ಎದುರಿಸಬೇಕು. ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ. ಇದೆಲ್ಲ ಸತ್ಯಕ್ಕೆ ದೂರವಾಗಿದ್ದು. ಈ ವಿಚಾರವನ್ನು ಯಾರು ಕೂಡ ಗಣನೆಗೆ ತೆಗೆದುಕೊಳ್ಳಬಾರದು ಎಂದು ಮನವಿ‌ ಮಾಡಿದರು.

    ಕಾಲ್ತುಳಿತ ಘಟನೆಯ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಾದೀಶರಾದ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ. ಈಗ ಹೇಳಿಕೆ ನೀಡಿದರೆ ತನಿಖೆಯ ದಿಕ್ಕು ಬೇರೆ ಕಡೆ ಹೋಗುತ್ತದೆ ಎಂದರು.

    ದೆಹಲಿಗೆ ಕರೆದಿಲ್ಲ:

    ಪಕ್ಷದ ವರಿಷ್ಟರು ನನ್ನನ್ನು ದೆಹಲಿಗೆ ಕರೆದಿಲ್ಲ. ಫೋನ್‌ನಲ್ಲಿ ಮಾತನಾಡುತ್ತಿರುತ್ತಾರೆ. ಘಟನೆಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇಳುತ್ತಾರೆ. ಸಿಎಂ, ಡಿಸಿಎಂ ಅವರನ್ನು ಕೇಳಿ ಮಾಹಿತಿ‌ ಪಡೆಯುತ್ತಾರೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.