ತಿಪಟೂರು: ಕರ್ನಾಟಕ ರಾಜ್ಯದ ಭೋವಿ ಜನಾಂಗದ ಜಾಗೃತಿ ಸಮಾವೇಶವು ಸೆಪ್ಟಂಬರ್ 28ರ ಭಾನುವಾರ ಬೆಳಗ್ಗೆ 10 ಗಂಟೆಗೆ ತುಮಕೂರಿನ ಅಮಾನಿಕೆರೆ ಆವರಣದ ಗಾಜಿನ ಮನೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ರಾಜ್ಯ ಭೋವಿ ಸಮಾಜ ಉಪಾಧ್ಯಕ್ಷರಾದ ಶಶಿಧರ್ ಅಯ್ಯನ ಬಾವಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಚಿತ್ರದುರ್ಗ ಭೋವಿ ಸಮಾಜದ ಜಗದ್ಗುರುಗಳಾದ ಇಮ್ಮಡಿ, ಸಿದ್ದರಾಮೇಶ್ವರ ಸ್ವಾಮೀಜಿಗಳು, ಸಿಎಂ ಬಸವರಾಜ ಬೊಮ್ಮಾಯಿ, ಚಲನಚಿತ್ರ ನಟರಾದ ರಾಘವೇಂದ್ರ ರಾಜಕುಮಾರ್, ಅಜಯ್ ರಾವ್, ಐಎಎಸ್ ಅಧಿಕಾರಿ ಮಂಜುನಾಥ್ ಪ್ರಸಾದ್ ಹಾಗೂ ತುಮಕೂರಿನ ಎಲ್ಲಾ ಶಾಸಕರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz