ತುಮಕೂರು: ಜಿಲ್ಲೆ ಕೊರಟಗೆರೆ ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿದ್ದನ್ನು ಪರಿಶಿಷ್ಟ ಪಂಗಡದ ಬಾಲಕನಿಂದ ಮಲವನ್ನು ಸ್ವಚ್ಛ ಗೊಳಿಸುತ್ತಿರುವ ವಿಷಯದ ಬಗ್ಗೆ ನೈಜ ಹೋರಾಟಗಾರರ ವೇದಿಕೆ ಬೆಂಗಳೂರು, ಮಾನವ ಹಕ್ಕುಗಳ ಆಯೋಗಕ್ಕೆ ಇ–ಮೇಲ್ ಮೂಲಕ ದೂರು ನೀಡಿದೆ.
ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿದ್ದನ್ನು ಪರಿಶಿಷ್ಟ ಪಂಗಡದ ಬಾಲಕನೂರ್ನಿಂದ ಮಲವನ್ನು ಸ್ವಚ್ಛ ಗೊಳಿಸುತ್ತಿರುವ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿ ಪ್ರಸಾರವಾಗಿದೆ.
ನಾವು 21ನೇ ಶತಮಾನಕ್ಕೆ ಅಭಿವೃದ್ಧಿ ಹೊಂದಿದ ದೇಶಗಳ ಜೊತೆ ಮೊದಲ ಸಾಲಿನಲ್ಲಿ ನಿಂತಿರುವ ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಇಂಥ ಹೀನಾಯ ವಾದ ಕೃತ್ಯ ಕರ್ನಾಟಕ ರಾಜ್ಯ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿರುವುದು ದುರಾದೃಷ್ಟಕರ ಸಂಗತಿಯಾಗಿದೆ.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು ಜಿಲ್ಲಾ ಘಟಕವು ಸ್ಪಷ್ಟನೆಯನ್ನು ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯ ನಿರ್ದೇಶನದಂತೆ ಕೊರಟಗೆರೆ ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಯಕ್ಕೆ ಲಕ್ಷ್ಮಿ ಎಂಟರ್ಪ್ರೈಸಸ್ ಇವರಿಗೆ ಟೆಂಡರ್ ಅನ್ನು ನೀಡಿದ್ದು ನೇರವಾಗಿ ನಾವು ಯಾವುದೇ ಸ್ವಚ್ಛತಾ ಕಾರ್ಯವನ್ನು ಮಾಡುತ್ತಿಲ್ಲವೆಂದು ತಿಳಿಸಿದ್ದಾರೆ .
ಬಹಳ ಮುಖ್ಯವಾಗಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಪ್ರತಿಕ್ರಿಯೆಗೆ ಮತ್ತು ಸಮರ್ಥನೆಗೆ ಮುಂದಾದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ತುಮಕೂರು ಘಟಕವು ಏನು ತಪ್ಪು ಮಾಡಿಲ್ಲ ಎಂಬಂತೆ ಸಮರ್ಥಿಸಿಕೊಳ್ಳುತ್ತಿದೆ.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ 10 ವರ್ಷದ ಪರಿಶಿಷ್ಟ ಪಂಗಡದ ಬಾಲಕನಿಗೆ ಮಲಗುಂಡಿಯಲ್ಲಿ ಸ್ವಚ್ಛತೆ ಕಾರ್ಯಕ್ಕೆ ನಿಯೋಜಿಸಿರುವ ಗುತ್ತಿಗೆ ಪಡೆದ ಗುತ್ತಿಗೆದಾರರು ಮತ್ತು ಇವರಿಗೆ ಗುತ್ತಿಗೆ ನೀಡಿದ ತುಮಕೂರು ಜಿಲ್ಲಾ ಘಟಕದ ರಸ್ತೆ ಸಾರಿಗೆ ನಿಗಮದ ತುಮಕೂರು ಜಿಲ್ಲಾ ಘಟಕದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನದಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದರೂ ಸಹ ಈ ಕೃತ್ಯ ನಡೆದಿಲ್ಲವೆಂಬಂತೆ ಬಿಂಬಿಸಲು ಮತ್ತು ಈ ಪ್ರಕರಣವನ್ನು ಮುಚ್ಚಿ ಹಾಕಲು ಜಿಲ್ಲಾಡಳಿತ ಮತ್ತು ಇನ್ನಿತರ ಪಟ್ಟ ಭದ್ರ ಹಿತಾಸಕ್ತಿಗಳು ಕಾರ್ಯಪ್ರವೃತ್ತ ರಾಗಿ ಇರುವುದು ನಮಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಪ್ರಕರಣವು ಪೂರ್ಣ ಪ್ರಮಾಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮೇಲೆ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆಯು ಈ ಮೂಲಕ ತಮ್ಮಲ್ಲಿ ವಿನಯ ಪೂರ್ವಕವಾದ ಆಗ್ರಹವನ್ನು ಪಡಿಸುತ್ತಿದೆ.
ಇಡೀ ಜಿಲ್ಲೆಗೆ ಇದರಿಂದ ಕೆಟ್ಟ ಹೆಸರು ಬರುತ್ತದೆ ಎಂದು ಪ್ರಭಾವಿ ರಾಜಕಾರಣಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಿ ಈ ಪ್ರಕರಣ ನಡೆದೇ ಇಲ್ಲ ಎಂಬ ಬಗ್ಗೆ ಬಿಂಬಿಸಲು ಪ್ರಯತ್ನ ಪಡುತ್ತಿದ್ದಾರೆ ಎಂಬ ವಿಷಯ ಮೇಲ್ನೋಟಕ್ಕೆ ನಮಗೆ ಕಂಡು ಬಂದಿದೆ ಆದುದರಿಂದ ಈ ಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿ ಯಾವುದೇ ರೀತಿಯ ಒತ್ತಡವಿದ್ದರೂ ಸಹ ಅದಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ನಮ್ಮ ಕೋರಿಕೆಯಾಗಿದೆ ಎಂದು ದೂರಿನಲ್ಲಿ ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಕುಣಿಗಲ್ ನರಸಿಂಹಮೂರ್ತಿ, ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಎಚ್.ಎಸ್. ಸ್ವಾಮಿ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q