ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದು, ಒಂದೂವರೇ ವರ್ಷ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೊಡುತ್ತಾರೆ. ಹುದ್ದೆ ಬಿಟ್ಟು ಹೋಗ್ತಾರೆ. ವೈರಾಗ್ಯ ಬಂದ ಮೇಲೆ ಏನೂ ಮಾಡಲು ಸಾಧ್ಯವಿಲ್ಲ. ದೇಶವನ್ನು ನಂತರ ಆಳುವವರು ಸನ್ಯಾಸಿ ಎಂದಿದ್ದಾರೆ.
ಬೆಂಗಳೂರಿನ ಧರ್ಮರಾಯ ದೇವಸ್ಥಾನದ ಕರಗ ಉತ್ಸವದಲ್ಲಿ ಭಾಗಿಯಾದ ಬ್ರಹ್ಮಾಂಡ ಗುರೂಜಿ ಮಾಧ್ಯಮಗಳ ಜೊತೆ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ್ದು, ವಯಸ್ಸಿನ ಕಾರಣದಿಂದ ಅವರ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನುವ ಚರ್ಚೆಗಳ ನಡುವೆಯೇ ಬ್ರಹ್ಮಾಂಡ ಗುರೂಜಿ ಈ ಹೇಳಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW