ಬೆಂಗಳೂರು : ಗಾರೆ ಕೆಲಸ ಮಾಡಿಕೊಂಡಿದ್ದ ಮಗನ ಅಂಗಾಂಗವನ್ನು ಪೋಷಕರು ದಾನ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುರದಮಾತ ಗ್ರಾಮದ ದಂಪತಿ, ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟ ಮಗ ತರುಣ್ ಬಾಲಚಂದ್ರನ ಅಂಗಾಂಗ ದಾನ ಮಾಡಿದ್ದಾರೆ.
ಕೆಂಗೇರಿ ಬಳಿಯ ನಿರ್ಮಾಣ ಹಂತದ ಕಟ್ಟಡವೊಂದರ ಎರಡನೇ ಮಹಡಿಯಿಂದ ತರುಣ್ ಡಿ. 19ರಂದು ಆಯತಪ್ಪಿ ಕೆಳಗೆ ಬಿದ್ದಿದ್ದರು.
ಈ ವೇಳೆ ಗಂಭೀರ ಗಾಯಗಳಾಗಿದ್ದವು. ಕೆಂಗೇರಿ ಬಳಿಯ ಕ್ಲಿನಿಗಲ್ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ ಮೆದುಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದರು.


