ಮೆದುಳು ತಿನ್ನುವ ಅಮೀಬಾ ಸೋಂಕಿನ ಪ್ರಕರಣಗಳು ಕೇರಳದಲ್ಲಿ ಹೆಚ್ಚಾಗುತ್ತಿದ್ದು ಭಾರಿ ಆತಂಕ ಮೂಡಿಸಿದೆ, ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ.
ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ.
ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಸೋಂಕು ಹರಡುವ ಆತಂಕದ ಹಿನ್ನೆಲೆ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಕಲುಷಿತ ನೀರಿನಲ್ಲಿ ಈಜಾಡದಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಭೆ ನಡೆಸಿದ್ದು ಸೋಂಕು ಹರಡದಂತೆ ತಡೆಯಲು ಕಲುಷಿತ ಜಲಮೂಲಗಳಲ್ಲಿ ಸ್ನಾನ ಮಾಡದಂತೆ ಸಲಹೆಗಳನ್ನು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA