nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರಾಂಡ್ ಬೆಂಗಳೂರು ಸಂವಾದದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಗಳು
    ರಾಜ್ಯ ಸುದ್ದಿ July 16, 2023

    ಬ್ರಾಂಡ್ ಬೆಂಗಳೂರು ಸಂವಾದದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಗಳು

    By adminJuly 16, 2023No Comments3 Mins Read
    dk shivakumar

    ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಖಾತೆ ಎಂದು ಕರೆಯುವ ಬದಲು ಅದಕ್ಕೆ ಬೇರೆ ಹೆಸರು ಇಟ್ಟು, ಎಲ್ಲ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು, ಎಸ್. ಎಂ ಕೃಷ್ಣ ಅವರ ಕಾಲದಲ್ಲಿ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಪಾಣಿಗಳನ್ನು ನೀಡುವ “ಭೂಮಿ” ವ್ಯವಸ್ಥೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಮನೆ ಬಾಗಿಲಲ್ಲೇ ಆಸ್ತಿ ದಾಖಲೆಗಳನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.

    ಬ್ರಾಂಡ್ ಬೆಂಗಳೂರು ಸಂವಾದದ ನಂತರ ಮಾತನಾಡಿದ ಅವರು, ಇನ್ನು ಆಸ್ತಿ ತೆರಿಗೆ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆಯಾಗಿದ್ದು, ಕಾನೂನು ರೀತಿಯಲ್ಲಿ ತೆರಿಗೆ ಕಟ್ಟುತ್ತಿರುವವರಿಗೆ ತೊಂದರೆಯಾಗುತ್ತಿದ್ದು, ತೆರಿಗೆ ಕಟ್ಟದವರಿಗೆ ರಕ್ಷಣೆ ಸಿಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಲಾಯಿತು.

    ನಾವು ಮನೆ ಬಾಗಿಲಲ್ಲೇ ಆಯಾ ಆಸ್ತಿ ದಾಖಲೆಗಳನ್ನು ತಲುಪಿಸಿದರೆ, ಯಾರ ಬಳಿ ಎಷ್ಟು ಆಸ್ತಿ ಇದೆ ಎಂಬ ಸ್ಪಷ್ಟ ಚಿತ್ರಣ ಸಿಗುತ್ತದೆ. ಆಗ ಯಾರೂ ಕೂಡ ಆಸ್ತಿ ತೆರಿಗೆ ಪಾವತಿಸದೇ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಆಸ್ತಿ ತೆರಿಗೆ ವಿಚಾರದಲ್ಲಿ ದೊಡ್ಡವರು, ಸಣ್ಣವರು ಎಂಬ ಬೇಧ ಮಾಡುವುದಿಲ್ಲ. ಈ ವಿಚಾರದಲ್ಲಿ ಯಾರು ತೆರಿಗೆ ಪಾವತಿಸಿಲ್ಲ ಎಂದು ಮ್ಯಾಪಿಂಗ್ ಮಾಡುತ್ತೇವೆ. ನಾವು ನಮ್ಮ ಸಂಪನ್ಮೂಲ ವೃದ್ಧಿಸಿಕೊಳ್ಳದಿದ್ದರೆ ಬೆಂಗಳೂರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾವು ಕೈಗೆತ್ತಿಕೊಳ್ಳಲು ಮುಂದಾಗಿರುವ ಬೃಹತ್ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಳ್ಳಬೇಕು. ಹೀಗಾಗಿ ಎಲ್ಲರೂ ತೆರಿಗೆ ಪಾವತಿಸುವಂತೆ ನೋಡಿಕೊಳ್ಳಬೇಕು ಎಂದರು.

    ಇನ್ನು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಕ್ಕಳ ಅಭಿಪ್ರಾಯವನ್ನು ಪಡೆಯಲು ಸಲಹೆ ಬಂದಿದ್ದು, ಮಕ್ಕಳ ಸಲಹೆಯನ್ನು ಸರ್ಕಾರ ಪರಿಗಣಿಸಲಿದೆ. ಈ ವಿಚಾರವಾಗಿ ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಜೊತೆ ಸಭೆ ಆಯೋಜಿಸುವಂತೆ ಒಂದು ಸಂಸ್ಥೆಗೆ ಸೂಚನೆ ನೀಡಿದ್ದೇನೆ. ಎಲ್ಲರ ಅಭಿಪ್ರಾಯ ಪಡೆಯಲು ಸಾಧ್ಯವಾಗದೇ ಇರುವುದರಿಂದ ಡಿಬೇಟ್ ಕಾರ್ಯಕ್ರಮದ ಮೂಲಕ ಬೆಂಗಳೂರಿನ ವಿಚಾರವಾಗಿ ಮಕ್ಕಳು ಯಾವ ರೀತಿ ಕನಸು ಕಾಣುತ್ತಿದ್ದಾರೆ ಎಂದು ಅವರ ಅಭಿಪ್ರಾಯ ತಿಳಿಯಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ಕಾನೂನು ಇದ್ದು, ಫುಟ್ಬಾತ್ ಮೇಲೆ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು, ಪಾದಚಾರಿಗಳಿಗೂ ಅನುಕೂಲ ಆಗುವಂತೆ ನೀತಿ ರೂಪಿಸಲಾಗುವುದು ಎಂದು ತಿಳಿಸಿದರು.

    ಇನ್ನು ತ್ಯಾಜ್ಯ ವಿಲೇವಾರಿ ವಿಚಾರ ಕೂಡ ಹಿಂದಿನ ಸಭೆಯಲ್ಲಿ ಚರ್ಚೆಯಾಗಿದ್ದು ಎಲ್ಲಿಂದರಲ್ಲಿ ರಸ್ತೆಗಳ ಪಕ್ಕದಲ್ಲಿ ತ್ಯಾಜ್ಯಗಳನ್ನು ಸುರಿಯುತ್ತಿದ್ದಾರೆ. ಈ ವಿಚಾರವಾಗಿ ಪಾಲಿಕೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದೇನೆ. ರಾಜ್ಯದಲ್ಲಿ ವಾಹನಗಳ ಮಾಲೀಕರ ಸಂಘದ ಜೊತೆ ಮಾತನಾಡಿದ್ದು ಎಲ್ಲೆಂದರಲ್ಲಿ ಜನ ತ್ಯಾಜ್ಯ ವಿಲೇವಾರಿ ಮಾಡದಂತೆ ಸೂಚನೆ ನೀಡಿದ್ದೇನೆ. ಯಾವ ವಾಹನಗಳು ಎಲ್ಲಿ ತ್ಯಾಜ್ಯ ಸಂಖ್ಯೆ ಅವುಗಳನ್ನು ಎಲ್ಲಿ ವಿಲೇವಾರಿ ಮಾಡಲಾಗಿದೆ ಎಂಬ ದಾಖಲೆ ಸಲ್ಲಿಸುವ ಬಗ್ಗೆಯೂ ಸೂಚನೆ ನೀಡಿದ್ದೇನೆ. ಎಲ್ಲೆಲ್ಲಿ ಹೆಚ್ಚಾಗಿ ಘನ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ ಎಂಬ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದರು.

    ಯಾವ ವಾಹನಗಳು ತ್ಯಾಜ್ಯ ವಿಲೇವಾರಿ ಮಾಡಿದೆ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.  ಬೆಂಗಳೂರಿನ ಸ್ವಚ್ಛತೆ ಕಾಪಾಡುವ ವಿಚಾರವಾಗಿ ಈ ತಿಂಗಳಲ್ಲಿ ಎರಡು ಮೂರು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು. ಈಗ ಅದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇನ್ನು ಬೆಂಗಳೂರಿನಲ್ಲಿ ಜಾಹೀರಾತು ವಿಚಾರವಾಗಿ ನೂತನ ನೀತಿಯನ್ನು ರಚಿಸಲಾಗುವುದು. ಆ ಮೂಲಕ ಹೆಚ್ಚಿನ ಆದಾಯ ಬರುವಂತೆ ಮಾಡಲಾಗುವುದು ಎಂದರು.

    ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಸುಮಾರು 6 ರಿಂದ 7 ವಿಭಾಗಗಳಲ್ಲಿ ಸಾರ್ವಜನಿಕರಿಂದ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಈ ಸಲಹೆಗಳ ಪರಿಶೀಲನೆ ಹಾಗೂ ವರ್ಗೀಕರಣಕ್ಕೆ ಕೆಲವು ಸಂಘ ಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗಿದೆ.

    ಇಂದಿನ ಸಭೆಯಲ್ಲಿ ಸರ್ಕಾರ ನಾಗರಿಕರ ಸಮಸ್ಯೆಗಳನ್ನು ಆಗಾಗ ಆಲಿಸುತ್ತಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಳ್ಳಿಗಳಲ್ಲಿ ಗ್ರಾಮ ಸಭೆಗಳ ಮಾದರಿಯಲ್ಲಿ ವಾರ್ಡ್ ಮಟ್ಟದಲ್ಲಿ ವಾರ್ಡ್ ಸಭೆಗಳನ್ನು ಮಾಡಬೇಕು. ಆ ಮೂಲಕ ಸ್ಥಳೀಯ ನಾಗರೀಕರ ಅಭಿಪ್ರಾಯ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

    ರಸ್ತೆ ಗುಂಡಿ ವಿಚಾರವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ಮಾಡಲಾಗುವುದು. ಈ ವಿಚಾರವಾಗಿ ಗೃಹಮಂತ್ರಿಗಳ ಜೊತೆ ಮಾತನಾಡಿದ್ದು, ಕಲಾಪ ಮುಗಿದ ಬಳಿಕ ಸಭೆ ಮಾಡುತ್ತೇನೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.