ಲೋಕಾಯುಕ್ತ ಬಲ ತುಂಬಿದ್ಧೇ ಭ್ರಷ್ಟಾಚಾರ ನಿಗ್ರಹಕ್ಕೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ‘ಭ್ರಷ್ಟಾಚಾರ ತಡೆಯುವುದಕ್ಕಾಗಿ ಲೋಕಾಯುಕ್ತ ಸ್ಥಾಪನೆ ಮಾಡಿದ್ದೇವೆ. ಕಾಂಗ್ರೆಸ್ ಶಾಸಕರ ಮೇಲು ಹಲವು ಆರೋಪಗಳಿತ್ತು, ಅವೆಲ್ಲವೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಿದ್ದು, ಆ ಎಲ್ಲ ಕೇಸ್ಗಳ ತನಿಖೆ ಆಗಲಿ ಎಂದು ಹೇಳಿದರು.
ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದು ಭ್ರಷ್ಟಾಚಾರ ನಿಯಂತ್ರಿಸಲು. ಹಿಂದೆ ಲೋಕಾಯುಕ್ತ ಇಲ್ಲದೆ ಕಾಂಗ್ರೆಸ್ ಕಾಲದ ಕೇಸ್ಗಳು ಮುಚ್ಚಿಹೋಗಿದ್ದವು. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ರಕ್ಷಣೆ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


