ನಮ್ಮ ಮೆಟ್ರೋ ರೈಲುಗಳಲ್ಲಿ ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಪ್ರಸಾರ ಮಾಡುವುದನ್ನು ಬಿಎಂಆರ್‌ಸಿಎಲ್ ನಿಷೇಧಿಸಿದೆ. ಇಯರ್ ಫೋನ್ ಬಳಸಿ ಸಂಗೀತ ಆಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಕೇಳುವುದರಿಂದ, ಇತರೆ ಪ್ರಯಾಣಕರಿಗೆ ಇದು ಕಿರಿಕಿರಿ ಉಂಟುಮಾಡುತ್ತದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಪ್ರಯಾಣಿಸುವಾಗ ಓದುತ್ತಿರುತ್ತಾರೆ. ಕೆಲವರು ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿರುತ್ತಾರೆ. ಇನ್ನು ಹಲವರು ಕೆಲಸಕ್ಕೆ ಸಂಬಂಧಿಸಿದಂತೆ ದೂರವಾಣಿಯಲ್ಲಿ ಮಾತನಾಡುತ್ತಾರೆ.ಹೀಗಾಗಿ ದೊಡ್ಡದಾಗಿ ಮ್ಯೂಸಿಕ್ ಹಾಕಿದ್ರೆ ಸಹಜವಾಗಿ ತೊಂದರೆ ಆಗುತ್ತೆ ಅಂತ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


