ಸರಗೂರು: ಸ್ತನ್ಯಪಾನವನ್ನು ಸಂರಕ್ಷಿಸಿ, ಪೋತ್ಸಾಹಿಸಿ, ಮುಂದುವರಿಸಲು ಸರ್ಕಾರ, ಆರೋಗ್ಯ ಇಲಾಖೆ, ಸಂಘ–ಸಂಸ್ಥೆಗಳು, ಕುಟುಂಬದ ಸದಸ್ಯರೆಲ್ಲರೂ ಹೊಣೆ ಹೊರಬೇಕಾಗಿದೆ ಸ್ತನ್ಯಪಾನವನ್ನು ಸಂರಕ್ಷಿಸಲು ಸಂಘ–ಸಂಸ್ಥೆಗಳು ಮುಂದೆ ಬರಬೇಕು. ಕುಟುಂಬದ ಸದಸ್ಯರೆಲ್ಲರೂ ತಾಯಿಗೆ ಮಾನಸಿಕ ಬೆಂಬಲ ನೀಡಿ ಪೋತ್ಸಾಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಟಿ ರವಿಕುಮಾರ್ ತಿಳಿಸಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸರಗೂರುವತಿಯಿಂದ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ಇವರ ಸಹಯೋಗದೊಂದಿಗೆ ಬುಧವಾರದಂದು ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯ ಕ್ರಮವನ್ನು ಆಯೋಜಿಸಲಾಗಿ ಕಾರ್ಯ ಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಗುವಿಗೆ 2 ವರ್ಷ ತುಂಬುವ ತನಕ ಎದೆಹಾಲನ್ನು ಮುಂದುರಿಸಬೇಕು. ಇದು ಮಗುವಿನ ಮೆದುಳು ಬೆಳವಣಿಗೆಗೂ ಅವಶ್ಯಕ ಹಾಗೂ ಮಗುವಿನ ಬುದ್ಧಿಮಟ್ಟವನ್ನು ಹೆಚ್ಚಿಸುತ್ತದೆ. ಸೂಕ್ತ ರೀತಿಯಲ್ಲಿ ಎದೆಹಾಲುಣಿಸುವುದರಿಂದ ತಾಯಿ ಬೇಗ ಗರ್ಭ ಧರಿಸುವುದಿಲ್ಲ. ಇದು ನೈಸರ್ಗಿಕ ಕುಟುಂಬ ಯೋಜನೆ ಇದ್ದಂತೆ. 2 ವರ್ಷ ಸರಿಯಾಗಿ ಎದೆಹಾಲುಣಿಸಿದ ತಾಯಿಂದಿರಿಗೆ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ಬರುವುದು ಅಪರೂಪ ಸ್ತನ್ಯಪಾನ ಮಾಡಿಸುವ ತಾಯಿ–ಮಗುವಿನ ಬಾಂಧವ್ಯ ಸುಮಧುರವಾಗಿರುತ್ತದೆ.ಕುಟುಂಬದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ. ದೇಶದ ಆರ್ಥಿಕತೆಗೂ ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಮಕ್ಕಳ ತಜ್ಞ ರಾದ ಡಾ.ಜಯಮಾಲಾ ಮಾತನಾಡಿ, ಮಗು ಜನಿಸಿದ ಅರ್ಧ ಗಂಟೆಯಿಂದ 1 ಗಂಟೆಯೊಳಗೆ ಮೊದಲ ಬಾರಿಗೆ ಎದೆಹಾಲುಣಿಸಬೇಕು. ಮೊದಲ 3 ದಿನ ಬರುವ ಗೀಬಿನ ಹಾಲನ್ನು (ಕೊಲೊಸ್ಟ್ರೋಮ್) ಮಗುವಿಗೆ ನೀಡಲೇಬೇಕು. ಮೊದಲು ಬರುವ ಹಳದಿ ವರ್ಣದ ಗಟ್ಟಿಹಾಲು ಮಗುವಿಗೆ ಮೊದಲ ಲಸಿಕೆ ಇದ್ದಂತೆ. ಕೊಲೊಸ್ಟ್ರೋಮ್ ನಲ್ಲಿ ಪೌಷ್ಟಿಕಾಂಶ ಉತ್ಕೃಷ್ಟವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತದೆ. ಮುಂಬರುವ ದೀರ್ಘಕಾಲಿನ ಕಾಯಿಲೆಗಳನ್ನು ತಡೆಗಟ್ಟುತ್ತದೆ ಎಂದರು.
ಮಗುವಿನ ಜಠರ ಸ್ವಚ್ಛವಾಗುತ್ತದೆ. 6 ತಿಂಗಳು ತುಂಬುವವರೆಗೂ ಕೇವಲ ಎದೆಹಾಲನ್ನೇ ಕೊಡಬೇಕು. (ವೈದ್ಯರು ತಿಳಿಸಿದ ಔಷಧಗಳನ್ನು ಹೊರತು ಪಡಿಸಿ) ಎಂತಹ ಕಡುಬೇಸಿಗೆ ಇದ್ದರೂ ನೀರನ್ನು ಕುಡಿಸುವ ಅವಶ್ಯಕತೆ ಇರುವುದಿಲ್ಲ. ಎದೆಹಾಲನ್ನು ಹೊರತುಪಡಿಸಿ ಹರಳೆಣ್ಣೆ, ಜೇನುತುಪ್ಪ, ಸಕ್ಕರೆನೀರು, ಹಸುವಿನ ಹಾಲು, ಪೌಡರ್ ಹಾಲನ್ನು ಕೊಡಬಾರದು ಎಂದು ತಿಳಿಸಿದ್ದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಾಧಿಕಾ ಶ್ರೀನಾಥ್ ರವರು ಮಾತನಾಡಿ, ಈ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಸಂತೋಷಕರವಾದ ವಿಷಯ ತಾಯಿ ಎದೆ ಹಾಲು ಉಣಿಸುವುದರಿಂದ ತಾಯಿ ಮತ್ತು ಮಗುವಿನ ಬಾಂಧವ್ಯ ಬೆಳೆಯುತ್ತದೆ, ಮತ್ತೆ ಎಲ್ಲಾ ತಾಯಂದಿರು ಕಡ್ಡಾಯವಾಗಿ ಹಾಲನ್ನು ಉಣಿಸಬೇಕು. ಎಂದು ತಿಳಿಸಿದರು.
ಈ ಕಾರ್ಯ ಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವೀರೇಶ್, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಪಾರ್ಥ ಸಾರಥಿ, ದಂತ ವೈದ್ಯರು ಡಾ.ಪೂರ್ಣಿಮಾ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ರವಿರಾಜ್, ಶರಣಪ್ಪ, ರಮಣಿ, ಅರ್ಚನಾ, ಅಸೀಮಾ ಸುಲ್ತಾನ್ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರಾದ ಜಗದೀಶ್, ಮಹದೇವ್, ಹರೀಶ್, ಬಸಮ್ಮ, ಶಾಂತಿ,ಭಾಗ್ಯ ಲಕ್ಷ್ಮಿ,ಮಾನಸ, ಮಂಜುಳಾ, ಶ್ವೇತಾ, ಸಹನಾ, ಶ್ವೇತಾ ಎನ್ ವೈ, ಆಶಾ ಕಾರ್ಯಕರ್ತೆಯರು ಹಾಗೂ ತಾಯಂದಿರು, ಸಾರ್ವಜನಿಕರು. ಇನ್ನಿತರರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC