nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    • ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
    • ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು
    • ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ
    • ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್‌.ಮುನಿಯಪ್ಪ
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು
    ಜಿಲ್ಲಾ ಸುದ್ದಿ March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    By adminMarch 17, 2026No Comments2 Mins Read
    ramesh babu

    ಬಳ್ಳಾರಿ: ಹೆರಿಗೆ ನಂತರದಲ್ಲಿ ತಾಯಂದಿರು ನವಜಾತ ಶಿಶುವಿಗೆ ಪದೇ ಪದೇ ಎದೆ ಹಾಲುಣಿಸುವ ಮೂಲಕ ಅಧಿಕ ಬಿಸಿಲಿನಿಂದ ಮಕ್ಕಳಲ್ಲಿ ಉಂಟಾಗುವ ನಿರ್ಜಲೀಕರಣವನ್ನು ತಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ ಬಾಬು ತಿಳಿಸಿದ್ದಾರೆ.

    ಜಿಲ್ಲೆಯ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಜಾಗೃತಿ ಮೂಡಿಸಿದ ಅವರು, ಸಾಮಾನ್ಯವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ 40 ಡಿಗ್ರಿ ಮೇಲ್ಪಟ್ಟು ದಾಖಲಾಗುತ್ತದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ ನೀಡಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನವಜಾತ ಶಿಶುಗಳು ಮತ್ತು ಮಕ್ಕಳ ಹಾರೈಕೆಯಲ್ಲೂ  ತಾಯಂದಿರು ಮತ್ತು ಪಾಲಕರು ಹೆಚ್ಚಿನ ಜಾಗೃತಿ ವಹಿಸುವುದು ಅವಶ್ಯಕತೆ ಇದೆ. ವಯಸ್ಕರು, ಸಾಮಾನ್ಯ ಮನುಷ್ಯನಿಗಿಂತ ಮಕ್ಕಳಲ್ಲಿ ನಿರ್ಜಲೀಕರಣ ಪ್ರಮಾಣ ಹೆಚ್ಚುತ್ತದೆ. ಹೀಗಾಗಿ ತಾಯಂದಿರು ಮಕ್ಕಳಿಗೆ ಪದೇ ಪದೇ ಎದೆ ಹಾಲುಣಿಸಬೇಕು ಎಂದರು.


    Provided by
    Provided by

    ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆರಿಗೆಯಾಗುವ ಅದರಲ್ಲೂ ಮೊದಲ ಮಗುವಿಗೆ ಜನನ ನೀಡುವ ತಾಯಿಗೆ ತನ್ನ ನವಜಾತ ಶಿಶುವಿಗೆ ಹೆರಿಗೆ ನಂತರದಲ್ಲಿ ನಿಯಮಿತವಾಗಿ ಹಾಲುಣಿಸುವ ಅಭ್ಯಾಸವು ಗೊತ್ತಿಲ್ಲದೇ ಕೆಲವು ನವಜಾತ ಶಿಶುವುಗಳಲ್ಲಿ ನಿರ್ಜಲೀಕರಣ ಕಂಡುಬರುವ ಸಾಧ್ಯತೆಗಳಿವೆ. ಅದರಲ್ಲೂ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾದಲ್ಲಿ ಇಂತಹ ಸಾಧ್ಯತೆಗಳು ಹೆಚ್ಚು. ಅಂತಹ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಚೊಚ್ಚಲು ಹೆರಿಗೆಯಾದ ಬಾಣಂತಿಯರಿಗೆ ಹೆರಿಗೆ ನಂತರದಲ್ಲಿ ಪ್ರತಿ ಒಂದರಿಂದ 2 ಗಂಟೆಯೊಳಗಡೆ ಶಿಶುವಿಗೆ ತಪ್ಪದೇ ಎದೆ ಹಾಲುಣಿಸಬೇಕು ಮತ್ತು ಎದೆ ಹಾಲಿನಲ್ಲಿ ಶೇ.70 ರಷ್ಟು ನೀರಿನ ಅಂಶವಿರುವದರಿಂದ ಮಗುವಿಗೆ ಉಂಟಾಗಬಹುದಾದ ನಿರ್ಜಲೀಕರಣವನ್ನು ತಡೆಗಟ್ಟುತ್ತದೆ. 6 ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನು ಮಾತ್ರ ಕೊಡಬೇಕು. ಅಲ್ಲದೇ ಮಗುವಿಗೆ ಬಿಸಿಲಿನ ತಾಪಮಾನದಿಂದ ರಕ್ಷಿಸಲು ತೆಳುವಾದ ಹತ್ತಿಬಟ್ಟೆಯನ್ನು ಮಾತ್ರ ಹಾಕಬೇಕು. 2 ರಿಂದ 3 ಬಟ್ಟೆಗಳನ್ನು ಅಥವಾ ಹೊದಿಕೆಯನ್ನು ಮಕ್ಕಳಿಗೆ ಹಾಕದಂತೆ ಕಾಳಜಿ ವಹಿಸಬೇಕು ಎಂದರು.

    ಇನ್ನು ಸಾರ್ವಜನಿಕರು ಕೂಡ ಬಿಸಿಲಿನಿಂದ ರಕ್ಷಣೆ ಮೊರೆ ಹೋಗಬೇಕು. ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಆದಷ್ಟು ಮನೆಯಲ್ಲಿಯೇ ಇರಲು ಪ್ರಯತ್ನಿಸಬೇಕು. ಒಂದು ವೇಳೆ ಮನೆಯಿಂದ ಹೊರಗೆ ಬರುವ ಅಗತ್ಯವಿದ್ದರೆ ಛತ್ರಿ ಹಾಗೂ ನೀರಿನ ಬಾಟೆಲ್‌ನೊಂದಿಗೆ ಬರುವಂತೆ ಡಿಎಚ್‌ ಒ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಶಿವಮೊಗ್ಗ:  ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ…

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026

    ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.