ಮುಜಫರ್ ನಗರ: ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಲು ಭಾವನೇ ಸುಪಾರಿ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ.21ರಂದು ನಡೆದಿದೆ.
ಇಬ್ಬರು ಸುಪಾರಿ ಹಂತಕರ ಜತೆ ಸೇರಿಕೊಂಡು ಭಾವನೇ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಕೊಲೆ ಮಾಡಿದ್ದಾನೆ. ಸಾಕ್ಷ್ಯ ನಾಶಗೊಳಿಸಲು ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಆಶಿಶ್ ನನ್ನು ಬಂಧಿಸಲಾಗಿದೆ. ಪತ್ನಿಯ ಸಹೋದರಿಯೊಂದಿಗೆ ಆಶಿಶ್ ಸಂಬಂಧ ಹೊಂದಿದ್ದ. ಆಕೆ ಇದನ್ನೆ ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ಗುಟ್ಟು ರಟ್ಟಾಗುವ ಭೀತಿಯಿಂದ ಕೃತ್ಯ ಎಸಗಿರುವುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
ನಾದಿನಿಯ ಹತ್ಯೆ ಮಾಡಲು ಬ್ಯಾಂಕ್ ನಿಂದ 40 ಸಾವಿರ ರೂ. ಸಾಲ ಪಡೆದಿದ್ದ ಆಶಿಶ್ ಸುಪಾರಿ ಹಂತಕರಿಗೆ 10 ಸಾವಿರ ರೂ. ಮುಂಗಡ ಹಣ ನೀಡಿದ್ದ. ಹತ್ಯೆ ಬಳಿಕ 20 ಸಾವಿರ ರೂ. ಹಣ ನೀಡಿದ್ದ ಎಂದು ಆತ ತಿಳಿಸಿದ್ದಾನೆ.
ಜ.21ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮೂವರು ದುಷ್ಕರ್ಮಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಸುಟ್ಟು ಹಾಕಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4