ಬೆಂಗಳೂರು: ಗಾಂಜಾ ತರಲು ನೀಡಿದ್ದ 500 ರೂಪಾಯಿ ವಾಪಸ್ ಕೇಳಲು ಹೋದ ವೇಳೆ ಯುವಕನೊಬ್ಬ ಮತ್ತೊಬ್ಬ ಯುವಕನಿಂದ ಬರ್ಬರವಾಗಿ ಹತ್ಯೆಗೀಡಾದ ಘಟನೆ ಹೊಸಕೋಟೆ ತಾಲೂಕಿನ ಕಟ್ಟಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಟ್ಟಿಗಾನಹಳ್ಳಿ ನಿವಾಸಿ ಮೋಹಿನ್ ಹತ್ಯೆಗೀಡಾದ ಯುವಕನಾಗಿದ್ದಾನೆ. ಮೋಹಿನ್ ಗಾಂಜಾ ವ್ಯಸನಿಯಾಗಿದ್ದರಿಂದ ರೋಶನ್ ಗೆ ಗಾಂಜಾ ತರಲು 500 ರೂ. ಹಣವನ್ನು ನೀಡಿದ್ದ. ಆದರೆ ರೋಷನ್ ಗಾಂಜಾ ತರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮನೆಗೆ ಹೋಗಿದ್ದ.
ಈ ವಿಚಾರವಾಗಿ ಇವರಿಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ರೋಷನ್ ಚಾಕುನಿಂದ ಮೋಹಿನ್ನ ಎದೆ, ಪಕ್ಕೆಲುಬು ಭಾಗಕ್ಕೆ 3 ಬಾರಿ ಚುಚ್ಚಿದ್ದಾನೆ.
ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮೋಹಿನ್ ನನ್ನು ಸ್ನೇಹಿತರು ಮಾಲೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೋಹಿನ್ ಮೃತಪಟ್ಟಿದ್ದಾನೆ.
ಆರೋಪಿ ರೋಶನ್ ಹುಡುಗರಿಗೆ ಗಾಂಜಾ ತಂದು ಕೊಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ತಿರುಮಶೆಟ್ಟಿ ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ರೋಶನ್ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4