ಸರಕಾರಿ ಕೆಲಸ ಹುಡುಕುವವರಿಗೆ ಭಾರತೀಯ ಸೇನೆಯ ಗಡಿ ಭದ್ರತಾ ಪಡೆ ಸಿಹಿ ಸುದ್ದಿ ನೀಡಿದ್ದು 1410 ಕಾನ್ಸ್ಟೇಬಲ್ (ಟ್ರೇಡ್ಸ್ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 1, 2023 ಕೊನೆಯ ದಿನಾಂಕವಾಗಿದ್ದು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಕಾನ್ಸ್ಟೇಬಲ್ (ಪುರುಷ)- 1343 ಹುದ್ದೆಗಳು ಕಾನ್ಸ್ಟೇಬಲ್ (ಮಹಿಳೆ)- 67 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವವರು ಮಾರ್ಚ್ 1, 2023ಕ್ಕೆ ಅನುಗುಣವಾಗಿ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಜೊತೆ ಐಟಿಐ ಪ್ರಮಾಣ ಪತ್ರವೊಂದಿರಬೇಕೆಂದು ತಿಳಿಸಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy