ತುಮಕೂರು : ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಎಸ್ ಎಫ್ ಯೋಧ ಎಸ್ ಜಿ ಸುರೇಶ್ ಕುಮಾರ್(36) ಅವರು, ಅನಾರೋಗ್ಯದಿಂದ ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ನಿವಾಸಿ, ಬಿಎಸ್ ಎಫ್ ಯೋಧರಾಗಿದ್ದ ಸುರೇಶ್ ಕುಮಾರ್ ಅವರು ಜಯರಾಮರೆಡ್ಡಿ– ಸುದಮ್ಮ ದಂಪತಿಯ ಹಿರಿಯ ಮಗ. ಕಿಡ್ನಿ ವೈಪಲ್ಯದಿಂದ ಚಂಡಿಗಢ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.
ಒಂದು ತಿಂಗಳ ಹಿಂದೆ ಊರಿಗೆ ಬಂದು ಹೋಗಿದ್ದ ಸುರೇಶ್ ಕುಮಾರ್ ಕಿಡ್ನಿ ವೈಪಲ್ಯದಿಂದ ಚಂಡಿಗಢ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಪತ್ನಿಗೆ ಎರಡನೇ ಮಗುವಿನ ಹೆರಿಗೆಯ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದೆ ಊರಿಗೆ ಸುರೇಶ್ ಕುಮಾರ್ ಬಂದು ಇತ್ತೀಚೆಗೆ ಅ ಸೇನೆಗೆ ವಾಪಸ್ ಆಗಿದ್ದರು. ಇದರ ಬೆನ್ನಲ್ಲೇ ಅನಾರೋಗ್ಯದಿಂದ ಚಂಡಿಗಡದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸಂಜೆ ಅವರು ಇಹಲೋಕ ತ್ಯಜಿಸಿದ್ದಾರೆ.
ಇಂದು ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ. ನಾಳೆ ಸ್ವಗ್ರಾಮದಲ್ಲಿ ಸುರೇಶ್ ಕುಮಾರ್ ರವರ ಅಂತ್ಯಕ್ರಿಯೆ ನಡೆಯಲಿದೆ. ಸುರೇಶ್ ಕುಮಾರ್ ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.