ಅಮೃತಸರ/ಜಮ್ಮು: ಪಂಜಾಬ್ ನ ಪಠಾಣ್ ಕೋಟ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಪಡೆಗಳು ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದಿದೆ.
ಗಡಿ ಭದ್ರತಾಪಡೆ ಸಿಬ್ಬಂದಿಯೂ ಉದ್ದಕ್ಕೂ ಬಾರ್ಡರ್ ಔಟ್ ಪೋಸ್ಟ್ ತಶ್ವತನ್ ಪ್ರದೇಶದಲ್ಲಿ ಕೆಲವು ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ್ದರು. ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ ಮಾಡಲಾಗುತ್ತಿದೆ. ಘಟನೆಯ ಬಗ್ಗೆ ಪಾಕಿಸ್ತಾನ ರೇಂಜರ್ಗಳೊಂದಿಗೆ ತೀವ್ರ ಪ್ರತಿಭಟನೆಯನ್ನು ದಾಖಲಿಸಲಾಗುವುದು ಎಂದು ಬಿಎಸ್ಎಫ್, ಜಮ್ಮು ಗಡಿರೇಖೆಯ ವಕ್ತಾರರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4