ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ BSNL ಈಗ ಬಿಎಸ್ ಎನ್ ಎಲ್ ಹೊಸ 4G ಸೇವೆಗಳನ್ನು ಪರಿಚಯಿಸಿದ್ದು, 5G ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈ ಹಿನ್ನೆಲೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಹೊಸ ಲೋಗೋ ಪರಿಚಯಿಸಿದರು.
ರಾಷ್ಟ್ರೀಯ ಧ್ವಜವನ್ನು ಪ್ರತಿಬಿಂಬಿಸುವ ಕೇಸರಿ ಬಣ್ಣವನ್ನು ಮುಂಚೂಣಿಯಲ್ಲಿಟ್ಟುಕೊಂಡು ತ್ರಿವರ್ಣ ಮಾದರಿಯಲ್ಲಿ ಲೋಗೋ ಸಿದ್ಧಪಡಿಸಲಾಗಿದೆ. ಇದರೊಂದಿಗೆ 7 ಹೊಸ ಯೋಜನೆಗಳನ್ನು ಪರಿಚಯಿಸಲಾಗಿದೆ. ಅಲ್ಲದೇ, ಲೋಗೋದಲ್ಲಿನ ಕನೆಕ್ಟಿಂಗ್ ಇಂಡಿಯಾ ಅನ್ನು ಕನೆಕ್ಟಿಂಗ್ ಭಾರತ್ ಎಂದು ಬದಲಾಯಿಸಲಾಗಿದೆ.
ಈ ಹಿಂದೆ ಇತರ ಕಂಪನಿಗಳ ರೀಚಾರ್ಜ್ ಯೋಜನೆಗಳಲ್ಲಿ ಬೆಲೆ ಏರಿಕೆಯಿಂದಾಗಿ ಜನರು ಬಿಎಸ್ ಎನ್ ಎಲ್ ನೆಟ್ ವರ್ಕ್‌ಗೆ ಬದಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ಹಲವೆಡೆ ನೆಟ್ ವರ್ಕ್ ಸಮಸ್ಯೆ ತಲೆದೋರಿದೆ.
ಕಂಪನಿಯು ಈ ಸಮಸ್ಯೆಗಳನ್ನು ನಿಭಾಯಿಸುತ್ತಿದೆ ಮತ್ತು ದೇಶದಲ್ಲಿ 5ಜಿ ಸೇವೆಗಳನ್ನು ಪರಿಚಯಿಸಲು ಪ್ರಯತ್ನಿಸುತ್ತಿದೆ. ಬಿಎಸ್ ಎನ್ ಎಲ್ ಖಾಸಗಿ ಸ್ಪರ್ಧಿಗಳಿಗಿಂತ ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದ್ದರೂ, ನೆಟ್‌ವರ್ಕ್ ಸಮಸ್ಯೆಗಳನ್ನು ಸರಿಪಡಿಸಿದರೆ ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296