ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಇಂದು ಮತ್ತು ನಾಳೆ(ನ. 18 ಮತ್ತು19) ದೇಶದಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಮಿಂಚಿನ ನೋಂದಾವಣೆ) ನಡೆಯಲಿದೆ.
ರಾಜ್ಯದ ಪ್ರತಿ ಮತಗಟ್ಟೆಗಳಲ್ಲಿ ಇಂದು ಮತ್ತು ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ.
ಅಧಿಕಾರಿಗಳು ಮತಗಟ್ಟೆಗಳಲ್ಲಿ ಇದ್ದು ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮತದಾರರು ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ.


