ಬಳ್ಳಾರಿ: ಜಿಲ್ಲೆಯ ಬಿಟಿಪಿಎಸ್(Ballary Thermal Power Station) ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ.
ಬಳ್ಳಾರಿಯ ಕುಡತಿನಿ ಬಳಿಯ ಬಿಟಿಪಿಎಸ್ ಆಕ್ಸಿಜನ್ ಪ್ಲ್ಯಾಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಕ್ಸಿಜನ್ ಫಿಲ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರ್ಮಿಕರ ಮೈಗೆಲ್ಲ ಹತ್ತಿಕೊಂಡಿದೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಕಾರ್ಮಿಕರಿಗೆ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮುರುಳಿಧರನ್ ಆರ್., ಹಿರಿಯೂರು.. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB