nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    ತುಮಕೂರು May 2, 2026

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    By adminMay 2, 2026No Comments2 Mins Read
    parameshwar

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು ಗೃಹಸಚಿವರೂ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ನಗರದ ಹೊರವಲಯದ ಶ್ರೀ ಸಿದ್ಧಾರ್ಥ ನಗರದಲ್ಲಿ ಆಯೋಜಿಸಲಾಗಿದ್ದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಗವಾನ್ ಬುದ್ಧರು ಹುಟ್ಟಿದ, ಬುದ್ಧರಿಗೆ ಜ್ಞಾನೋದಯವಾದ ಹಾಗೂ ಬುದ್ಧರು ಸಮಾಧಿ ಸ್ಥಿತಿಗೆ ತೆರಳಿದ ದಿನ ಇದಾಗಿದ್ದರಿಂದ ಈ ದಿನಕ್ಕೆ ಪ್ರಾಮುಖ್ಯತೆ ಬಂದಿದೆ. ಇಂದು ಜಗತ್ತು ದುಃಖದಲ್ಲಿ ಬಿದ್ದು ನರಳುತ್ತಿದೆ. ಈ ದುಃಖದಿಂದ ಹೊರಬರಬೇಕು ಎಂದರೆ ಬುದ್ಧನ ಅಷ್ಟಾಂಗ ಮಾರ್ಗವನ್ನು ಪಾಲಿಸಬೇಕು. ಆಗ ಮಾತ್ರ ಜಗತ್ತು ದುಃಖದಿಂದ ಹೊರಬರಲು ಸಾಧ್ಯ. ಬುದ್ಧನ ತತ್ವಗಳಲ್ಲಿ ಮನುಷ್ಯ ಮನುಷ್ಯನಿಗೆ ವ್ಯತ್ಯಾಸವಿಲ್ಲ, ಬೌದ್ಧ ಧರ್ಮದಲ್ಲಿ ಜಾತಿ ವ್ಯವಸ್ಥೆಯಿಲ್ಲ. ಬುದ್ಧನ ಎದುರು ಎಲ್ಲರೂ ಸಮಾನರು. ಹಾಗಾಗಿ ಬುದ್ಧನ ವಿಚಾರಗಳು ಸಾಕಷ್ಟು ಪ್ರಚಾರವಾಗಬೇಕು. ಪ್ರತಿಯೊಬ್ಬರನ್ನೂ ತಲುಪಬೇಕು. ಹಾಗಾಗಿ ಇನ್ನು ಸಾವಿರ ವರ್ಷ ಹೋದರೂ ಕೂಡ ಸಿದ್ಧಾರ್ಥನ ಹೆಸರು ಅಜರಾಮರವಾಗಿ ಜಗತ್ತಿನಲ್ಲಿ ಉಳಿಯುತ್ತದೆ ಎಂದು ಹೇಳಿದರು.

    ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ನಂಜುಂಡಪ್ಪ ಮಾತನಾಡಿ ಬುದ್ಧ ವಿಶ್ವದ ಬೆಳಕು. ಶಾಂತಿಮಂತ್ರವನ್ನು ಜಪಿಸಿದ ಮಹಾನ್ ಸಂತ. ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ಸುಧಾರಿಸಲು ಸಾಕಷ್ಟು ಸಮಾಜ ಸುಧಾರಕರು ಬಂದು ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಅದರಂತೆ ಬುದ್ಧ ಭಗವಾನರು ಸಮಾಜದಲ್ಲಿನ ತಾರತಮ್ಯವನ್ನು ಹೋಗಲಾಡಿಸಿ ಮನುಷ್ಯ ಮನುಷ್ಯನ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಎಲ್ಲರೂ ಸಮಾನರು ಎಂಬುದನ್ನು ತಿಳಿಸಿಕೊಟ್ಟರು. ವ್ಯಕ್ತಿಯು ಶಾಂತಿ ನೆಮ್ಮದಿಯಿಂದ ಇರಲು ಬೇಕಾದ ಮಾರ್ಗವನ್ನು ಬುದ್ಧರು ತಮ್ಮ ಅಷ್ಟಾಂಗ ಮಾರ್ಗದಲ್ಲಿ ತಿಳಿಸಿದ್ದಾರೆ. ಇದನ್ನು ನಾವೆಲ್ಲರೂ ಅರ್ಥಮಾಡಿಕೊಂಡು ಈ ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು.

    ನಂತರ ಸಂಸ್ಥೆಯ ಮಾರ್ಗದರ್ಶಕರಾದ ನರಸಿಂಗಪ್ಪ ಮಾತನಾಡಿ, ಇಂದು ನಾವು ಪಡೆಯುತ್ತಿರುವ ಶಿಕ್ಷಣ ಕೇವಲ ಒಂದು ವೃತ್ತಿಗಾಗಿ ಅಷ್ಟೇ. ನಿಜವಾದ ಶಿಕ್ಷಣ ನಮಗೆ ಇನ್ನು ದೊರೆತೇ ಇಲ್ಲ. ನಿಜವಾದ ಶಿಕ್ಷಣ ಹೇಗಿರಬೇಕು ಎಂದರೆ ಮಾನಸಿಕವಾದ ತೊಂದರೆಗಳನ್ನು ದೂರ ಮಾಡುವಂತಹ ಶಿಕ್ಷಣ ನಮಗೆ ಬೇಕು. ನಾವು ಹೆಚ್ಚು ದುಃಖಿಗಳಾಗಿರುವುದು ನಮ್ಮಲ್ಲಿರುವ ಅತಿಯಾದ ಆಸೆ, ಮೋಹ. ಇವೆಲ್ಲವುಗಳಿಂದ ಮುಕ್ತರಾದರೆ ಸದಾ ಆನಂದವಾಗಿರಬಹುದು. ಬುದ್ಧನ ತತ್ವಗಳು ಮನುಷ್ಯನು ಸನ್ನಡೆಯಿಂದ ಬದುಕುವ ಮಾರ್ಗವನ್ನು ತೋರಿಸುತ್ತವೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಟ್ರಸ್ಟಿಗಳಾದ ಡಾ. ಎಸ್. ಆನಂದ್, ಸಾಹೇ ವಿವಿ ಕುಲಸಚಿವರಾದ ಡಾ. ಅಶೋಕ್ ಮೆಹ್ರಾ, ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ವೈದ್ಯಕೀಯ ಅಧೀಕ್ಷಕರಾದ ಡಾ. ವೆಂಕಟೇಶ್, ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಂತೇಶ್ ಎಂ. ನಡಕಟ್ಟಿ ಹಾಗೂ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಶಾಲೆಗಳ ಮುಖ್ಯೋಪಾಧ್ಯಾಯರು, ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.