ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31, 2025 ರಿಂದ ಪ್ರಾರಂಭವಾಗಲಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಜನವರಿ 31 ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು 31 ಜನವರಿ 2025 ರಂದು ಪ್ರಾರಂಭವಾಗಿ ಫೆಬ್ರವರಿ 13 ರಂದು ಕೊನೆಗೊಳ್ಳುತ್ತದೆ.
ಅಧಿವೇಶನದ ಎರಡನೇ ಭಾಗವು 10 ಮಾರ್ಚ್ 2025 ರಂದು ಪ್ರಾರಂಭವಾಗುತ್ತದೆ ಮತ್ತು 4 ಏಪ್ರಿಲ್ 2025 ರವರೆಗೆ ಮುಂದುವರೆಯುತ್ತದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4