ಬೆಂಗಳೂರು: ಫೆಬ್ರವರಿ 16 ಶುಕ್ರವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡಿಸಲಿದ್ದು, ರಾಜಧಾನಿ ಬೆಂಗಳೂರಿಗೆ ಯಾವೆಲ್ಲ ಕೊಡುಗೆಗಳನ್ನು ನೀಡಬಹುದು ಎನ್ನುವ ಹಲವಾರು ನಿರೀಕ್ಷೆಗಳು ಹುಟ್ಟಿಕೊಂಡಿವೆ.
ನಗರದ ಸಂಚಾರ ದಟ್ಟಣೆನ್ನು ತಗ್ಗಿಸುವ ಕ್ರಮವಾಗಿ ಸುರಂಗ ಮಾರ್ಗಗಳ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ರಾಜ್ಯ ರಾಜಧಾನಿಯಲ್ಲಿ ಸಂಚಾರ ಸುಗಮಗೊಳಿಸಲು ಬ್ರ್ಯಾಂಡ್ ಬೆಂಗಳೂರು ಭಾಗವಾಗಿ ಸುರಂಗ ರಸ್ತೆಗಳನ್ನು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭದ ದಿನವಾದ ನಿನ್ನೆ ಜಂಟಿ ಸದನ ಉದ್ದೇಶಿಸಿ ಮಾತನಾಡುವ ವೇಳೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸುರಂಗ ರಸ್ತೆಗಳ ನಿರ್ಮಾಣವನ್ನು ಉದ್ದೇಶಿಸಲಾಗಿದೆ ಎಂದು ಹೇಳಿದ್ದರು.


