ತುಮಕೂರು: ಜಿಲ್ಲೆಯ ಬುಗುಡನಹಳ್ಳಿ ಮತ್ತು ಹೆಬ್ಬಾಕ ಕೆರೆಗಳಿಗೆ ತ್ಯಾಜ್ಯ ಸುರಿಯುವ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ.
ಈ ಕುರಿತಾಗಿ ಕಾನೂನು ಕ್ರಮಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಡಮರುಗ ಉಮೇಶ್ ಮಾಲಿನ್ಯ ನಿಯಂತ್ರಣ ಮಂಡಳಿ, ಮಹಾನಗರ ಪಾಲಿಕೆ, ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಜನವರಿ 3ರ ಶುಕ್ರವಾರ, ಮಧ್ಯಾಹ್ನ ವಾಹನವೊಂದರಲ್ಲಿ ತ್ಯಾಜ್ಯ ತಂದು ಕೆರೆಗೆ ಸುರಿಯುತ್ತಿರುವ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೋ ಸಾಕ್ಷಿಯೊಂದಿಗೆ, ತಕ್ಷಣದ ಕ್ರಮ ಕೈಗೊಳ್ಳುವಂತೆ ಉಮೇಶ್ ಮನವಿ ಮಾಡಿದ್ದಾರೆ.
ತ್ಯಾಜ್ಯ ಸುರಿಯುವ ಪ್ರಕರಣಗಳು ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತಿದ್ದು, ಕುಡಿಯುವ ನೀರನ್ನು ಮಾಲಿನ್ಯಗೊಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx