ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿಗಳಾಗಿದ್ದಾರೆ.
ಬುಲೆರೋ ವಾಹನ ಚಾಲಕನಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಅವಘಡ ಸಂಭವಿಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296