ತುಮಕೂರು: ಅರಣ್ಯ ಇಲಾಖೆಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ನೆಪದಲ್ಲಿ ಅರಣ್ಯ ಅಧಿಕಾರಿಯೊಬ್ಬರು ರೈತರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಬ್ಬಿ ತಾಲ್ಲೂಕಿನ ಚೇಳೂರು ಯಾದವರಗಟ್ಟಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಗುಬ್ಬಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತ ಬಸವರಾಜು ಮೇಲೆ ಹಲ್ಲೆ ನಡೆಸಿ, ಕುಟುಂಬದ ಸದಸ್ಯರನ್ನು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಲಾಟೆಯಲ್ಲಿ ಗಾಯಗೊಂಡ ರೈತ ಬಸವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ರೈತನ ಕುಟುಂಬಸ್ಥರು ಚೇಳೂರು ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy