nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    ರಾಜ್ಯ ಸುದ್ದಿ March 7, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    By adminMarch 7, 2026No Comments2 Mins Read
    siddaramaiah

    ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನಿಕಗೊಳಿಸಲು ಮತ್ತು ಪರಿಸರ ಸ್ನೇಹಿಯಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. 2,000 ಕೋಟಿ ರೂಪಾಯಿ ವೆಚ್ಚದಲ್ಲಿ ‘ಕರ್ನಾಟಕ ಎಲೆಕ್ಟ್ರಿಕ್ ಬಸ್ ಪ್ರೋಗ್ರಾಂ’ (KEBP) ಜಾರಿಗೆ ತರಲಾಗುತ್ತಿದ್ದು, ಇದರ ಅಡಿಯಲ್ಲಿ 4,000 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಸಾರಿಗೆ ನಿಗಮಗಳಿಗೆ ಸೇರ್ಪಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    ಈ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) 32 ಎಲೆಕ್ಟ್ರಿಕ್ ಬಸ್ ಡಿಪೋಗಳು ಹಾಗೂ ಇತರ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC, NWKRTC, KKRTC) 62 ಡಿಪೋಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಎಲೆಕ್ಟ್ರಿಕ್ ಬಸ್‌ ಗಳ ಜೊತೆಗೆ, 2026-27ನೇ ಸಾಲಿನಲ್ಲಿ 1,000 ಹೊಸ ಡೀಸೆಲ್ ಬಸ್‌ಗಳನ್ನು ಖರೀದಿಸಲು ಸರ್ಕಾರ ನಿರ್ಧರಿಸಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 6,596 ಬಸ್‌ಗಳನ್ನು ಈಗಾಗಲೇ ನಿಗಮಗಳಿಗೆ ಸೇರಿಸಲಾಗಿದೆ.


    Provided by
    Provided by

    ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯು ಯಶಸ್ವಿಯಾಗಿ ಮುಂದುವರಿಯಲಿದ್ದು, 2026-27ನೇ ಸಾಲಿಗೆ 3,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈವರೆಗೆ ಮಹಿಳೆಯರು ಒಟ್ಟು 684 ಕೋಟಿ ಬಾರಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

    ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಸಾರಿಗೆ ನೌಕರರ ದೀರ್ಘಕಾಲದ ಬೇಡಿಕೆಯಂತೆ, 2021ರ ಜನವರಿಯಿಂದ 2023ರ ಫೆಬ್ರವರಿವರೆಗಿನ ವೇತನ ಬಾಕಿ (Arrears) ಪಾವತಿಸಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಏಪ್ರಿಲ್ 1, 2025 ರಿಂದ ಹೊಸ ವೇತನ ಪರಿಷ್ಕರಣೆ ಜಾರಿಗೆ ಬರಲಿದ್ದು, ಇದಕ್ಕಾಗಿ 1,271 ಕೋಟಿ ರೂ. ಮೀಸಲಿಡಲಾಗಿದೆ.

    ಅಪಘಾತದ ‘ಬ್ಲಾಕ್ ಸ್ಪಾಟ್’ಗಳನ್ನು ಗುರುತಿಸಿ ನಿರ್ವಹಿಸಲು ಐಐಟಿ ಮದ್ರಾಸ್ ಮತ್ತು ಎನ್‌ಐಸಿ ಸಹಯೋಗದೊಂದಿಗೆ 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗುವುದು.

    ರಾಜ್ಯದ ಸಾರಿಗೆ ಕ್ಷೇತ್ರದಿಂದ ಈ ವರ್ಷ 11,630 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 8.5 ರಷ್ಟು ಪ್ರಗತಿ ಕಂಡುಬಂದಿದೆ. ಮುಂದಿನ ಸಾಲಿನಲ್ಲಿ ಮೋಟಾರು ವಾಹನ ತೆರಿಗೆಯಿಂದ 15,500 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.