nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಭಸ್ಮವಾದ ಹಸು, ಕರು, ಕುರಿ, ಮೇಕೆಗಳು…!
    ತುಮಕೂರು March 31, 2025

    ಸುಟ್ಟು ಭಸ್ಮವಾದ ಹಸು, ಕರು, ಕುರಿ, ಮೇಕೆಗಳು…!

    By adminMarch 31, 2025No Comments1 Min Read
    tumakuru news

    ತುಮಕೂರು: ಯುಗಾದಿ ಹಬ್ಬದ ಸಂಭ್ರಮದ ಮಧ್ಯೆ ಬಡ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿದ ದಾರುಣ ಘಟನೆ ನಡೆದಿದೆ. ಈ ದುರ್ಘಟನೆ ಶೋಕದ ಛಾಯೆ ಮೂಡಿಸಿದೆ.

    ಬುಕ್ಕಾಪಟ್ಟಣ ಹೋಬಳಿಯ ಹುಣಸೆಕಟ್ಟೆ ಗ್ರಾಮದ ಭೋವಿ ಜನಾಂಗದ ರತ್ನಮ್ಮ, ತಮ್ಮ ಇಬ್ಬರು ಮಕ್ಕಳ ಜೊತೆ ಊರಿನಿಂದ, ಎರಡು ಕಿಲೋ ಮೀಟರ್ ದೂರದಲ್ಲಿರುವ ತಮ್ಮ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಪತಿ ಸಿದ್ದಾಭೋವಿ ಸುಮಾರು 20 ವರ್ಷಗಳ ಹಿಂದೆ ಕುಟುಂಬವನ್ನು ಬಿಟ್ಟು ಎಲ್ಲೋ ತೆರಳಿದ್ದು, ಇದುವರೆಗೆ ಮರಳಿಲ್ಲ. ಈ ಕಾರಣದಿಂದ, ರತ್ನಮ್ಮ ಹೊಲದಲ್ಲಿಯೇ ಹಸು, ಕರು, ಕುರಿ, ಮೇಕೆಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು.


    Provided by
    Provided by

    ಶುಕ್ರವಾರ ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ, ಸುಮಾರು ರಾತ್ರಿ ಎರಡು ಗಂಟೆ ಸುಮಾರಿಗೆ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ, ರತ್ನಮ್ಮ ಮತ್ತು ಅವರ ಮಕ್ಕಳು ಎಚ್ಚರಗೊಂಡು ಆರಿಸುವ ಪ್ರಯತ್ನ ನಡೆಸಿದರು. ಆದರೆ, ಊರಿನಿಂದ ದೂರವಾಗಿರುವ ಕಾರಣದಿಂದ, ಸ್ಥಳೀಯರು ಬರುವಷ್ಟರಲ್ಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.

    ಎರಡು ಹಸುಗಳು, ಒಂದು ಕರು, ಎರಡು ಕುರಿ, ನಾಲ್ಕು ಮೇಕೆ, ಮನೆಯಲ್ಲಿದ್ದ ಬಟ್ಟೆಬರೆ, ಪಾತ್ರೆಗಳು, ದವಸ ಧಾನ್ಯಗಳು, ಎಲ್ಲವೂ ಸುಟ್ಟು ಹೋದವು. ಈ ದುರ್ಘಟನೆ, ಹೇಗೋ ಜೀವನ ಸಾಗಿಸುತ್ತಿದ್ದ ಕುಟುಂಬದ ಮೇಲೆ ಮತ್ತಷ್ಟು ಸಂಕಟವನ್ನು ತಂದೊಡ್ಡಿದೆ.

    ಘಟನೆ ತಿಳಿದು ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಕಾನೂನು ರೀತ್ಯಾ ಕ್ರಮ ಕೈಗೊಂಡಿದ್ದಾರೆ. ಸರ್ಕಾರದಿಂದ ಅನುಗ್ರಹ ಯೋಜನೆಯಡಿ ಪರಿಹಾರ ಧನ ಶೀಘ್ರದಲ್ಲಿಯೇ ವಿತರಿಸಲಾಗುವುದೆಂದು ಭರವಸೆ ನೀಡಲಾಗಿದೆ. ಹೋಬಳಿಯ ಜೆಡಿಎಸ್ ಮುಖಂಡರಾದ ಹೆಚ್.ಜೆ. ಸತ್ಯನಾರಾಯಣ, ನೊಂದ ಕುಟುಂಬಕ್ಕೆ ಧನ ಸಹಾಯ ನೀಡಿದ್ದು, ತಾತ್ಕಾಲಿಕ ವಾಸಕ್ಕಾಗಿ ಟಾರ್ ಪಾಲ್, ಅಡಿಗೆ ಸ್ಟೋವ್, ಸಿಲಿಂಡರ್, ದವಸ ಧಾನ್ಯಗಳನ್ನು ನೀಡಿ ಸಾಂತ್ವನ ಹೇಳಿದ್ದಾರೆ. ಈ ಸಹಾಯದಿಂದ ಕುಟುಂಬಕ್ಕೆ ತಾತ್ಕಾಲಿಕ ನೆಮ್ಮದಿ ದೊರಕಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 18, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತುಮಕೂರು: ಆಧುನಿಕತೆಯ ಸಂದರ್ಭದಲ್ಲಿ ಜಾತಿಯ ಉತ್ತುಂಗ ಮತ್ತು ಒಳಸುಳಿವು ಹೆಚ್ಚಿದೆ. ಮನುಷ್ಯನ ಅಂತರ್ಯದೊಳಗೆ ಜಾತಿಯ ಪರಾಕಾಷ್ಠೆ ಹೆಚ್ಚುತ್ತಿರುವುದರಿಂದಲೇ ಸಮಾಜದಲ್ಲಿ ವಿಘಟನೆಗಳು…

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.